Shyam 
ಬಾಲಿವುಡ್

ಸಕಲ ಸರ್ಕಾರಿ ಗೌರವದೊಂದಿಗೆ ಶ್ಯಾಮ್ ಬೆನಗಲ್ ಅಂತ್ಯಕ್ರಿಯೆ

ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರ ಅಂತ್ಯಕ್ರಿಯೆಯನ್ನು ದಾದರ್‌ನ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆಯಿತು.

ಮುಂಬೈ: ತೀವ್ರ ಅನಾರೋಗ್ಯದಿಂದ ಸೋಮವಾರ ನಿಧನರಾದ ಬಾಲಿವುಡ್ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರ ಅಂತ್ಯಕ್ರಿಯೆಯನ್ನು ಮಂಗಳವಾರ ಮುಂಬೈನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು.

ಕಳೆದ ಡಿಸೆಂಬರ್ 14 ರಂದು ತಮ್ಮ 90 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರ ಅಂತ್ಯಕ್ರಿಯೆಯನ್ನು ದಾದರ್‌ನ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆಯಿತು.

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಬೆನಗಲ್ ಅವರು ನಿನ್ನೆ ಸಂಜೆ 6:30ಕ್ಕೆ ಮುಂಬೈನ ವೊಕಾರ್ಡ್ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಅವರ ಪುತ್ರಿ ಪಿಯಾ ಬೆನಗಲ್ ತಿಳಿಸಿದ್ದಾರೆ. ಶ್ಯಾಮ್ ಬೆನಗಲ್ ಅವರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮಂಥನ್' ಮತ್ತು 'ಜುಬೇದಾ' ಚಿತ್ರಗಳಿಂದ ಖ್ಯಾತಿ ಪಡೆದಿದ್ದ ಬೆನಗಲ್ ಅವರಿಗೆ 1976 ರಲ್ಲಿ ಪದ್ಮಶ್ರೀ ಮತ್ತು 1991 ರಲ್ಲಿ ಪದ್ಮಭೂಷಣ ನೀಡಿ ಕೇಂದ್ರ ಸರ್ಕಾರ ಗೌರವಿಸಿತ್ತು.

ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಶ್ಯಾಮ್ ಬೆನಗಲ್ ಪ್ರಸಿದ್ಧ ನಿರ್ದೇಶಕ ಮತ್ತು ಸಾಕ್ಷ್ಯಚಿತ್ರ ತಯಾರಕರಾಗಿದ್ದರು. 1970 ಮತ್ತು 80ರ ದಶಕದಲ್ಲಿ ಪ್ಯಾರಲಲ್ ಸಿನಿಮಾ ಪ್ರವರ್ತಕರಾಗಿ ಇವರು ಹೆಸರು ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT