ರಿತು ರಾಜ್ ಸಿಂಗ್ 
ಬಾಲಿವುಡ್

ಕಿರುತೆರೆ ನಟ ರಿತು ರಾಜ್ ಸಿಂಗ್ ಹೃದಯಾಘಾತದಿಂದ ನಿಧನ

ವರದಿ ಪ್ರಕಾರ ರಿತುರಾಜ್ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಟೈಮ್ಸ್ ನೌ ನ್ಯೂಸ್ ಪ್ರಕಾರ ಅವರ ಆಪ್ತ ಸ್ನೇಹಿತ ಮತ್ತು ನಟ ಅಮಿತ್ ಬೆಹ್ಲ್ ಅವರ ಸಾವನ್ನು ಖಚಿತಪಡಿಸಿದ್ದಾರೆ.

ವರದಿ ಪ್ರಕಾರ ರಿತುರಾಜ್ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಟ ಹೃದಯಾಘಾತದಿಂದ ನಿಧನರಾದರು. ಅವರು ಮೇದೋಜ್ಜೀರಕ ಗ್ರಂಥಿಯ ಚಿಕಿತ್ಸೆಗಾಗಿ ಕೆಲವು ಸಮಯದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆಮೇಲೆ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದರು. ಆದರೆ ಕೆಲವು ಹೃದಯದ ತೊಂದರೆಗಳನ್ನು ಹೊಂದಿದ್ದರು. ಅದರಿಂದ ಅವರು ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ಟ್ವಿಟರ್​ನಲ್ಲಿ ನಟ ಅರ್ಷದ್ ವಾರ್ಸಿ ಹಿರಿಯ ನಟನ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ರಿತು ರಾಜ್ ನಿಧನರಾಗಿದ್ದಾರೆಂದು ತಿಳಿದು ನನಗೆ ತುಂಬಾ ದುಃಖವಾಗಿದೆ. ನಾವು ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದೆವು. ಅವರು ನಿರ್ಮಾಪಕರಾಗಿ ನನ್ನ ಮೊದಲ ಚಿತ್ರದ ಭಾಗವಾಗಿದ್ದರು. ಸ್ನೇಹಿತ ಮತ್ತು ಒಬ್ಬರನ್ನು ಒಳ್ಳೆಯ ವ್ಯಕ್ತಿಯನ್ನು ಕಳೆದುಕೊಂಡೆ. ಮಹಾನ್ ನಟ. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ

ನಟ ಸಂದೀಪ್ ಸಿಕಂದ್ ಕೂಡ ಈ ಬಗ್ಗೆ ಮಾತನಾಡಿ ʻʻಸುದ್ದಿ ಕೇಳಿ ನಾನು ಆಘಾತಕ್ಕೊಳಗಾದೆ. ಯಾರೋ ಒಬ್ಬರು ನನ್ನ ವಾಟ್ಸ್ ಆ್ಯಪ್ ಗ್ರೂಪ್‌ಗಳಲ್ಲಿ ಬೆಳಿಗ್ಗೆಯೇ ಸುದ್ದಿಯನ್ನು ಪೋಸ್ಟ್ ಮಾಡಿದ್ದರು. ನೋಡಿ ಶಾಕ್‌ ಆದೆ. ನಾನು ʻಕಹಾನಿ ಘರ್ ಘರ್ ಕಿʼಯಲ್ಲಿ ರಿತು ಅವರೊಂದಿಗೆ ನಟಿಸಿದ್ದೆ. ಅದ್ಭುತ ನಟ. ನಟನಿಗಿಂತ ಹೆಚ್ಚಾಗಿ ಅವರು ಒಳ್ಳೆಯ ವ್ಯಕ್ತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿʼʼಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!