ಪಂಕಜ್ ಉಧಾಸ್ 
ಬಾಲಿವುಡ್

'ಚೆಂದಕ್ಕಿಂತ ಚೆಂದ' ಖ್ಯಾತಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ!

ನಟ ಕಿಚ್ಚಾ ಸುದೀಪ್ ಅಭಿನಯದ ಚೊಚ್ಚಲ ‘ಸ್ಪರ್ಶ’ ಚಿತ್ರದ 'ಚೆಂದಕ್ಕಿಂತ ಚೆಂದ ನೀನೆ ಸುಂದರ' ಗೀತೆಯ ಗಾಯಕ ಪಂಕಜ್ ಉಧಾಸ್ ನಿಧನರಾಗಿದ್ದಾರೆ.

ಮುಂಬೈ: ನಟ ಕಿಚ್ಚಾ ಸುದೀಪ್ ಅಭಿನಯದ ಚೊಚ್ಚಲ ‘ಸ್ಪರ್ಶ’ ಚಿತ್ರದ 'ಚೆಂದಕ್ಕಿಂತ ಚೆಂದ ನೀನೆ ಸುಂದರ' ಗೀತೆಯ ಗಾಯಕ ಪಂಕಜ್ ಉಧಾಸ್ ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಗಾಯಕ ಪಂಕಜ್ ಉಧಾಸ್ ಅವರು, ಇಂದು ನಿಧನರಾಗಿದ್ದು, ಅವರಿಗೆ 72 ವರ್ಷವಾಗಿತ್ತು. ಪಂಕಜ್‌ ಅವರ ನಿಧನದ ಮಾಹಿತಿಯನ್ನು ಅವರ ಕುಟುಂಬ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, 'ದೀರ್ಘಕಾಲದ ಅನಾರೋಗ್ಯದಿಂದ ಫೆಬ್ರುವರಿ 26, 2024ರಂದು ಪಂಕಜ್ ಉಧಾಸ್‌ ಅವರು ನಿಧನರಾದರು. ಅವರ ನಿಧನದ ಬಗ್ಗೆ ಭಾರವಾದ ಹೃದಯದಿಂದ ನಿಮಗೆ ತಿಳಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಉಧಾಸ್ ಅವರು ಮೇ 17, 1951 ರಂದು ಗುಜರಾತ್‌ನ ಜೆಟ್‌ಪುರದಲ್ಲಿ ಜನಿಸಿದರು. ಪ್ರಸಿದ್ಧ ಗಾಯಕರೂ ಆಗಿದ್ದ ಅವರ ತಂದೆ ಮನುಭಾಯ್ ಉಧಾಸ್ ಅವರಿಂದ ಚಿಕ್ಕ ವಯಸ್ಸಿನಲ್ಲಿಯೇ ಸಂಗೀತ ಪಾಠ ಕಲಿತರು. ಕಾಲೇಜಿನಲ್ಲಿ ಪದವಿ ಪಡೆದ ನಂತರ, ಪಂಕಜ್ ಬಾಲಿವುಡ್ ಚಲನಚಿತ್ರಗಳಿಗೆ ಹಿನ್ನೆಲೆ ಗಾಯನದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಮುಂಬೈಗೆ ತೆರಳಿದರು. ಆದಾಗ್ಯೂ, ಅವರ ಅನನ್ಯವಾದ ಭಾವಪೂರ್ಣ ಧ್ವನಿಯು ಗಜಲ್ ಗಾಯನದಲ್ಲಿ ಅದರ ನಿಜವಾದ ಕರೆಯನ್ನು ಕಂಡುಕೊಂಡಿತು.

1980ರ ದಶಕದಲ್ಲಿ ಪಂಕಜ್​ ಉಧಾಸ್​ ಅವರು ಗಝಲ್​ ಗಾಯನದ ಮೂಲಕ ಫೇಮಸ್​ ಆಗಿದ್ದರು. ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಮಹೇಶ್ ಭಟ್ ಅವರ 1986 ರ ಕ್ರೈಮ್ ಥ್ರಿಲ್ಲರ್ ‘ನಾಮ್‌’ ಚಿತ್ರದ ‘ಚಿಟ್ಟಿ ಆಯಿ ಹೈ’ ಹಾಡು ಪಂಕಜ್‌ ಅವರ ಜನಪ್ರಿಯತೆಯನ್ನು ಹೆಚ್ಚಿಸಿತ್ತು. ಪಂಕಜ್‌ ಅವರು 2006ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.

ಹಿಂದಿ ಮಾತ್ರವಲ್ಲದೆ ಕನ್ನಡದಲ್ಲಿಯೂ ಹಿನ್ನೆಲೆ ಗಾಯಕರಾಗಿ ಪಂಕಜ್‌ ಹಾಡಿದ್ದಾರೆ. ಸ್ಪರ್ಶ ಚಿತ್ರದ ಬರೆಯದ ಮೌನ ಕವಿತೆ, ಚಂದಕ್ಕಿಂತ ಚಂದ ಹಾಡನ್ನು ಪಂಕಜ್‌ ಹಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT