ಕಂಗನಾ ರನೌತ್ 
ಬಾಲಿವುಡ್

ಬಿಲ್ಕಿಸ್ ಬಾನು ಆಧರಿಸಿದ ಸಿನಿಮಾಗಾಗಿ ನನ್ನ ಬಳಿ ಸ್ಕ್ರಿಪ್ಟ್ ಸಿದ್ಧವಿದೆ, ಆದರೆ...: ಕಂಗನಾ ರನೌತ್

ಬಿಲ್ಕಿಸ್ ಬಾನು ಪ್ರಕರಣವನ್ನು ಆಧರಿಸಿದ ಚಿತ್ರಕ್ಕಾಗಿ ನನ್ನ ಬಳಿ ಸ್ಕ್ರಿಪ್ಟ್ ಸಿದ್ಧವಾಗಿದೆ. ಆದರೆ, ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್ ಮತ್ತು ಪ್ರೈಮ್ ವಿಡಿಯೋದಿಂದ ಬೆಂಬಲದ ಕೊರತೆಯಿಂದಾಗಿ ಸಿನಿಮಾ ಮಾಡಲು ಸಾಧ್ಯವಾಗಲಿಲ್ಲ ಎಂದು ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.

ಮುಂಬೈ: ಬಿಲ್ಕಿಸ್ ಬಾನು ಪ್ರಕರಣವನ್ನು ಆಧರಿಸಿದ ಚಿತ್ರಕ್ಕಾಗಿ ನನ್ನ ಬಳಿ ಸ್ಕ್ರಿಪ್ಟ್ ಸಿದ್ಧವಾಗಿದೆ. ಆದರೆ, ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್ ಮತ್ತು ಪ್ರೈಮ್ ವಿಡಿಯೋದಿಂದ ಬೆಂಬಲದ ಕೊರತೆಯಿಂದಾಗಿ ಸಿನಿಮಾ ಮಾಡಲು ಸಾಧ್ಯವಾಗಲಿಲ್ಲ ಎಂದು ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.

2002ರ ಗುಜರಾತ್ ಗಲಭೆಯಲ್ಲಿ ಐದು ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಎಸಗಿ, ಆಕೆಯ ಕುಟುಂಬವನ್ನು ಕೊಂದ 11 ಅಪರಾಧಿಗಳನ್ನು ಅವಧಿಪೂರ್ವ ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಅಸಿಂಧುಗೊಳಿಸಿದೆ.

ಕಂಗನಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಬಳಕೆದಾರರೊಬ್ಬರು, 'ಆತ್ಮೀಯ ಕಂಗನಾ ಮೇಡಂ, ಮಹಿಳಾ ಸಬಲೀಕರಣದ ಬಗ್ಗೆ ನಿಮ್ಮ ಉತ್ಸಾಹವು ತುಂಬಾ ಉತ್ತೇಜನಕಾರಿಯಾಗಿದೆ! ಬಿಲ್ಕಿಸ್ ಬಾನು ಅವರ ಕಥೆಯನ್ನು ಬಲಿಷ್ಠ ಸಿನಿಮಾ ಮೂಲಕ ಹೇಳಲು ನೀವು ನಿಜವಾಗಿಯೂ ಆಸಕ್ತಿ ಹೊಂದಿದ್ದೀರಾ? ನೀವು ಮಾಡುತ್ತೀರಾ…. ನೀವು ಸಿನಿಮಾವನ್ನು ಬಿಲ್ಕಿಸ್ ಬಾನುಗಾಗಿ, ಸ್ತ್ರೀವಾದಕ್ಕಾಗಿ ಅಥವಾ ಕನಿಷ್ಠ ಮಾನವೀಯತೆಗಾಗಿಯಾದರೂ ಸಿನಿಮಾ ಮಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಬಹಳ ದಿನಗಳಿಂದ ಇಂತಹ ಸಿನಿಮಾ ಮಾಡಬೇಕೆಂದುಕೊಂಡಿದ್ದೆ ಆದರೆ ಯಾರಿಂದಲೂ ಬೆಂಬಲ ಸಿಗದಿರುವುದೇ ಈ ಸಿನಿಮಾ ಮಾಡಲು ಸಾಧ್ಯವಾಗದೇ ಇರುವುದಕ್ಕೆ ಕಾರಣ ಎಂದು ನಟಿ ಹೇಳಿದ್ದಾರೆ.

ಯೂಸರ್ ಒಬ್ಬರ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಅವರು, 'ನಾನು ಆ ಕಥೆಯನ್ನು ಸಿನಿಮಾ ಮಾಡಲು ಬಯಸುತ್ತೇನೆ, ನನ್ನ ಬಳಿ ಸ್ಕ್ರಿಪ್ಟ್ ಸಿದ್ಧವಾಗಿದೆ. ಕಳೆದ ಮೂರು ವರ್ಷಗಳಿಂದ ಆ ಪ್ರಕರಣದ ಬಗ್ಗೆ ಸಂಶೋಧನೆ ಮಾಡಿದ್ದೇನೆ. ಆದರೆ, ನೆಟ್‌ಫ್ಲಿಕ್ಸ್, ಪ್ರೈಮ್ ವೀಡಿಯೋ ಮತ್ತು ಇತರ ಸ್ಟುಡಿಯೋಗಳು ರಾಜಕೀಯ ಪ್ರೇರಿತ ಚಲನಚಿತ್ರಗಳನ್ನು ಮಾಡಬಾರದೆಂದು ಸ್ಪಷ್ಟ ಮಾರ್ಗಸೂಚಿಗಳನ್ನು ಹೊಂದಿರುವುದಾಗಿ ನನಗೆ ತಿಳಿಸಿದವು' ಎಂದು ಕಂಗನಾ ಬರೆದಿದ್ದಾರೆ.

'ಕಂಗನಾ ಅವರೊಂದಿಗೆ ನಾವು ಕೆಲಸ ಮಾಡುವುದಿಲ್ಲ. ಏಕೆಂದರೆ ಅವರು ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂದು JioCinema ಹೇಳಿದೆ ಮತ್ತು Zee ವಿಲೀನದ ಸುದ್ದಿಗಳಲ್ಲಿ ಬ್ಯುಸಿಯಾಗಿದೆ. ಹೀಗಿರುವಾಗ ಸಿನಿಮಾ ಮಾಡಲು ನನ್ನ ಮುಂದೆ ಬೇರೆ ಆಯ್ಕೆಗಳು ಯಾವುದಿದೆ? ಎಂದು ಪ್ರಶ್ನಿಸಿದ್ದಾರೆ.

ಸದ್ಯ ಕಂಗನಾ ಅವರು ಮುಂದಿನ 'ಎಮರ್ಜೆನ್ಸಿ' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT