ಮುಂಬಯಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಹೀಗಾಗಿ ಮುಖೇಶ್ ಅಂಬಾನಿ ಮಗನ ಅದ್ಧೂರಿ ಮದುವೆಗೆ ಗೈರು ಹಾಜರಾಗಲಿದ್ದಾರೆ.
ಕಳೆದ ಎರಡು ದಿನಗಳಿಂದ ಅಕ್ಷಯ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೀಗ ಅಕ್ಷಯ್ ಕುಮಾರ್‌ಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಹೀಗಾಗಿ ಜುಲೈ 12ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಸಮಾರಂಭಕ್ಕೆ ಗೈರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಕಳೆದ ಎರಡು ದಿನಗಳಿಂದ ಅಕ್ಷಯ್ ಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ತಮ್ಮ ಇತ್ತೀಚಿನ ಬಿಡುಗಡೆಯಾದ 'ಸರ್ಫಿರಾ' ಪ್ರಚಾರಕ್ಕಾಗಿ ದೂರ ದೂರಕ್ಕೆ ಪ್ರಯಾಣಿಸುತ್ತಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಮೂರು ದಿನಗಳವರೆಗೆ ಇರುತ್ತದೆ. ಜುಲೈ 12 ರಂದು ‘ಶುಭ ವಿವಾಹ’, ಜುಲೈ 13 ರಂದು ‘ಶುಭ್ ಆಶೀರ್ವಾದ್’ ಮತ್ತು ಜುಲೈ 14 ರಂದು ʻಆರತಕ್ಷತೆ, ನಂತರ ಜುಲೈ 15 ರಂದು ಮತ್ತೊಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿವೆ.