ಮುಂಬೈ: ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಚಿತ್ರದ ನಿರ್ದೇಶಕ ಆದಿತ್ಯ ಧರ್ ಅವರ ಮುಂದಿನ ಚಿತ್ರದಲ್ಲಿ ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಅವರು ಅಭಿನಯಿಸಲಿದ್ದಾರೆ ಎಂದು ಚಿತ್ರದ ನಿರ್ಮಾಪಕರು ಶನಿವಾರ ಘೋಷಿಸಿದ್ದಾರೆ.
ಇನ್ನು ಹೆಸರಿಡದ ಈ ಚಿತ್ರದಲ್ಲಿ ಬಾಲಿವುಡ್ ಹಿರಿಯ ನಟ ಸಂಜಯ್ ದತ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್ ಮತ್ತು ಆರ್ ಮಾಧವನ್ ಸೇರಿದಂತೆ ದೊಡ್ಡ ತಾರಾಗಣವನ್ನು ಒಳಗೊಂಡಿದೆ.
2019 ರಲ್ಲಿ ತೆರೆಕಂಡ ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಚಿತ್ರದ ಖ್ಯಾತಿಯ ಆದಿತ್ಯ ಧರ್ ಅವರು, ಸಹೋದರ ಲೋಕೇಶ್ ಧರ್ ಅವರೊಂದಿಗೆ ತಮ್ಮ ಬ್ಯಾನರ್ B62 ಸ್ಟುಡಿಯೋಸ್ ಮತ್ತು ಜಿಯೋ ಸ್ಟುಡಿಯೋಸ್‌ನ ಜ್ಯೋತಿ ದೇಶಪಾಂಡೆ ಜೊತೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಜಿಯೋ ಸ್ಟುಡಿಯೋಸ್ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರದ ತಾರಾಗಣವನ್ನು ಘೋಷಿಸಿದ್ದು, "ಈ ಸಿನಿಮಾ ಮೂಲಕ ಕನಸುಗಳು ಹುಟ್ಟಿಕೊಂಡಿವೆ! ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ಅಭಿನಯದ ಚಿತ್ರವು ಹಿಂದೆಂದಿಗಿಂತಲೂ ಉತ್ತಮ ಸಿನಿಮಾ ನೀಡಲು ಉತ್ಸಕರಾಗಿದ್ದೇವೆ ಎಂದು ಹೇಳಿದೆ.