ನವದೆಹಲಿ: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ಸಿಕಂದರ್' ಚಿತ್ರ ಬಿಡುಗಡೆಯಾದ ಎರಡೇ ದಿನಕ್ಕೆ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ಚಿತ್ರತಂಡ ಮಂಗಳವಾರ ತಿಳಿಸಿದೆ.
ಚಿತ್ರವನ್ನು ಎಆರ್ ಮುರುಗದಾಸ್ ನಿರ್ದೇಶಿಸಿದ್ದು, ನಾಡಿಯಾಡ್‌ವಾಲಾ ಗ್ರ್ಯಾಂಡ್‌ಸನ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಸಾಜಿದ್ ನಾಡಿಯಾಡ್‌ವಾಲಾ ನಿರ್ಮಿಸಿದ್ದಾರೆ.
ಚಿತ್ರವು ಮಾರ್ಚ್ 30ರಂದು ಬಿಡುಗಡೆಯಾಗಿದ್ದು, ಪ್ರೊಡಕ್ಷನ್ ಬ್ಯಾನರ್ ಎಕ್ಸ್ ಖಾತೆಯಲ್ಲಿ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
'ನಿಮ್ಮ ಪ್ರೀತಿಯಿಂದಲೇ ಈದ್ ವಿಶೇಷವಾಗಿತ್ತು! ನಾವು ನಿಜವಾಗಿಯೂ ಕೃತಜ್ಞರಾಗಿರುತ್ತೇವೆ! ಇಂದು ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಸಿಕಂದರ್ ಅನ್ನು ವೀಕ್ಷಿಸಿ! ಈಗಲೇ ನಿಮ್ಮ ಟಿಕೆಟ್‌ಗಳನ್ನು ಬುಕ್ ಮಾಡಿ' ಎಂದು ಬರೆಯಲಾಗಿದೆ.
'ಸಿಕಂದರ್' ಚಿತ್ರವು ತನ್ನ ಮೊದಲ ದಿನದಂದು ದೇಶೀಯ ಗಲ್ಲಾಪೆಟ್ಟಿಗೆಯಲ್ಲಿ 54.72 ಕೋಟಿ ರೂ. ಗಳಿಸಿತ್ತು. ಎರಡನೇ ದಿನ 51.17 ಕೋಟಿ ರೂ. ಗಳಿಸಿದೆ. ಒಟ್ಟು ಗಳಿಕೆ 105.89 ಕೋಟಿ ರೂ. ಆಗಿದೆ.
ಚಿತ್ರದಲ್ಲಿ ಕಾಜಲ್ ಅಗರ್ವಾಲ್, ಸತ್ಯರಾಜ್, ಶರ್ಮಾನ್ ಜೋಶಿ, ಪ್ರತೀಕ್ ಬಬ್ಬರ್, ಅಂಜಿನಿ ಧವನ್ ಮತ್ತು ಜತಿನ್ ಸರ್ನಾ ಕೂಡ ನಟಿಸಿದ್ದಾರೆ.