ಅನುಪಮ್ ಖೇರ್ 
ಬಾಲಿವುಡ್

ಅನುಪಮ್ ಖೇರ್, ಕಾಜೋಲ್ ಗೆ ಮಹಾರಾಷ್ಟ್ರ ಸರ್ಕಾರದ ರಾಜ್ ಕಪೂರ್ ಚಲನಚಿತ್ರ ಪ್ರಶಸ್ತಿ

ಖೇರ್ ಅವರನ್ನು ರಾಜ್ ಕಪೂರ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಕಾಜೋಲ್ ಅವರನ್ನು ರಾಜ್ ಕಪೂರ್ ವಿಶೇಷ ಕೊಡುಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಂಬೈ: ಖ್ಯಾತ ಬಾಲಿವುಡ್ ನಟ ಅನುಪಮ್ ಖೇರ್ ಮತ್ತು ನಟಿ ಕಾಜೋಲ್ ದೇವಗನ್ ಅವರಿಗೆ ಈ ವರ್ಷದ ಮಹಾರಾಷ್ಟ್ರ ಸರ್ಕಾರದ ಪ್ರತಿಷ್ಠಿತ ರಾಜ್ ಕಪೂರ್ ಚಲನಚಿತ್ರ ಪ್ರಶಸ್ತಿ ನೀಡಲಾಗುತ್ತಿದೆ ಎಂದು ರಾಜ್ಯ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಆಶಿಶ್ ಶೆಲಾರ್ ಅವರು ಗುರುವಾರ ಪ್ರಕಟಿಸಿದ್ದಾರೆ.

ಖೇರ್ ಅವರನ್ನು ರಾಜ್ ಕಪೂರ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಕಾಜೋಲ್ ಅವರನ್ನು ರಾಜ್ ಕಪೂರ್ ವಿಶೇಷ ಕೊಡುಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಪ್ರಶಸ್ತಿಗಳು ಕ್ರಮವಾಗಿ 10 ಲಕ್ಷ ಮತ್ತು 6 ಲಕ್ಷ ರೂ. ನಗದು ಬಹುಮಾನ ಒಳಗೊಂಡಿವೆ.

ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಮಹೇಶ್ ಮಂಜ್ರೇಕರ್ ಅವರಿಗೆ ಚಿತ್ರಪತಿ ವಿ ಶಾಂತಾರಾಮ್ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು. ಇದು 10 ಲಕ್ಷ ರೂ. ನಗದು ಬಹುಮಾನ, ಸ್ಮರಣಿಕೆ, ಪ್ರಶಂಸಾಪತ್ರ ಮತ್ತು ಬೆಳ್ಳಿ ಪದಕವನ್ನು ಒಳಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.

ಇನ್ನು ನಟಿ ಮುಕ್ತಾ ಬಾರ್ವೆ ಅವರಿಗೆ ಚಿತ್ರಪತಿ ವಿ ಶಾಂತಾರಾಮ್ ವಿಶೇಷ ಕೊಡುಗೆ ಪ್ರಶಸ್ತಿ ನೀಡಲಾಗುವುದು. ಇದು 6 ಲಕ್ಷ ರೂ. ನಗದು ಬಹುಮಾನ, ಸ್ಮರಣಿಕೆ, ಪ್ರಶಂಸಾಪತ್ರ ಮತ್ತು ಬೆಳ್ಳಿ ಪದಕವನ್ನು ಒಳಗೊಂಡಿದೆ.

ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ 1993 ರಲ್ಲಿ ಸ್ಥಾಪಿಸಲಾದ ಲತಾ ಮಂಗೇಶ್ಕರ್ ಪ್ರಶಸ್ತಿಯನ್ನು ಈ ವರ್ಷ ಹಿರಿಯ ಮರಾಠಿ ಗಜಲ್ ಗಾಯಕ ಭೀಮರಾವ್ ಪಾಂಚಾಲೆ ಅವರಿಗೆ ನೀಡಲಾಗುವುದು. ಈ ಪ್ರಶಸ್ತಿ ಸಹ 10 ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರ ಒಳಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಏಪ್ರಿಲ್ 25 ರಂದು ಇಲ್ಲಿನ ಎನ್‌ಎಸ್‌ಸಿಐ ಡೋಮ್‌ನಲ್ಲಿ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!