ಕಂಗನಾ ರನೌತ್, ಜಾವೇದ್ ಅಖ್ತರ್ 
ಬಾಲಿವುಡ್

ಜಾವೇದ್ ಅಖ್ತರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಇತ್ಯರ್ಥ; ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್!

ನ್ಯಾಯಾಲಯಕ್ಕೆ ಹಾಜರಾದ ನಂತರ, ಕಂಗನಾ ಜಾವೇದ್ ಅಖ್ತರ್ ಜೊತೆಗಿನ ಫೋಟೊವನ್ನು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದು, ತಮ್ಮ ನಡುವಿನ ಕಾನೂನು ಹೋರಾಟಕ್ಕೆ ತೆರೆಬಿದ್ದಿದೆ ಎಂದು ತಿಳಿಸಿದ್ದಾರೆ.

ಮುಂಬೈ: ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ತಮ್ಮ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ನಾಲ್ಕು ವರ್ಷಗಳ ಬಳಿಕ ಶುಕ್ರವಾರ ಮಧ್ಯಸ್ಥಿಕೆ ಮೂಲಕ ಬಾಲಿವುಡ್ ನಟಿ ಕಂಗನಾ ರಣಾವತ್ ಬಗೆಹರಿಸಿಕೊಂಡಿದ್ದಾರೆ. ಹಿರಿಯ ಸಾಹಿತಿಗೆ ಬಿಜೆಪಿ ಸಂಸದೆ ಕ್ಷಮೆಯಾಚಿಸಿದ್ದಾರೆ.

ಇವರಿಬ್ಬರೂ ಶುಕ್ರವಾರ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಪರಸ್ಪರರ ವಿರುದ್ಧ ಸಲ್ಲಿಸಿದ್ದ ದೂರುಗಳನ್ನು ಹಿಂಪಡೆಯುವ ನಿರ್ಧಾರವನ್ನು ತಿಳಿಸಿದರು.

ನ್ಯಾಯಾಲಯಕ್ಕೆ ಹಾಜರಾದ ನಂತರ, ಕಂಗನಾ ಜಾವೇದ್ ಅಖ್ತರ್ ಜೊತೆಗಿನ ಫೋಟೊವನ್ನು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದು, ತಮ್ಮ ನಡುವಿನ ಕಾನೂನು ಹೋರಾಟಕ್ಕೆ ತೆರೆಬಿದ್ದಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ನ್ಯಾಯಾಲಯವು ಮರುದಿನ ಔಪಚಾರಿಕ ಆದೇಶವನ್ನು ನೀಡಲಿದೆ.

ತಪ್ಪು ತಿಳುವಳಿಕೆಯಿಂದಾಗಿ ತಾನು ಜಾವೇದ್ ಅಖ್ತರ್ ಅವರ ವಿರುದ್ಧ ಹೇಳಿಕೆ ನೀಡಿದ್ದೇನೆ ಮತ್ತು ಇದರಿಂದ ಅವರಿಗೆ ಉಂಟಾದ ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇನೆ. ಭವಿಷ್ಯದಲ್ಲಿ ಅಂತಹ ಹೇಳಿಕೆಯನ್ನು ನೀಡುವುದಿಲ್ಲ ಎಂದು ನಟಿ ಹೇಳಿದ್ದಾರೆ.

ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಟಿ ಕಂಗನಾ, ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನಲ್ಲಿ ತನ್ನ ಹೆಸರನ್ನು ಎಳೆದು ತಂದಿದ್ದರು. ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಉಂಟುಮಾಡಿದ್ದಾರೆ ಎಂದು ಆರೋಪಿಸಿ ಜಾವೇದ್ ಅಖ್ತರ್ 2020 ರಲ್ಲಿ ಕಂಗನಾ ರಣಾವತ್ ವಿರುದ್ಧ ದೂರು ದಾಖಲಿಸಿದ್ದರು.

ಬಳಿಕ ಕಂಗನಾ ಕೂಡ ಜಾವೇದ್ ಅಖ್ತರ್ ಅವರ ವಿರುದ್ಧ ದೂರು ದಾಖಲಿಸಿದ್ದರು. 2016ರಲ್ಲಿ ಅಖ್ತರ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ಅವರು ತನ್ನನ್ನು ಬೆದರಿಸಿದನು ಮತ್ತು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು ಎಂದು ಆರೋಪಿಸಿದ್ದರು.

ಬಾಂದ್ರಾದ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಒಂದು ಗಂಟೆ ಸಂಧಾನ ನಡೆಯಿತು. ಈ ವೇಳೆ ಈ ವಿಷಯವನ್ನು ಇತ್ಯರ್ಥಗೊಳಿಸಲಾಯಿತು ಎಂದು ರಣಾವತ್ ಅವರ ವಕೀಲ ರಿಜ್ವಾನ್ ಸಿದ್ದಿಕಿ ಮತ್ತು ಅಖ್ತರ್ ಪರ ವಕೀಲ ಜಯ್ ಕುಮಾರ್ ಭಾರದ್ವಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!