ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ 
ಬಾಲಿವುಡ್

ಸೈಫ್ ಆಲಿ ಖಾನ್ ಮೇಲೆ ದಾಳಿ: ಮುಖ್ಯ ಆರೋಪಿ ಬಾಂಗ್ಲಾದೇಶ ಪ್ರಜೆ ಥಾಣೆಯಲ್ಲಿ ಬಂಧನ; ಮುಂಬೈ ಪೊಲೀಸರಿಂದ ತೀವ್ರ ವಿಚಾರಣೆ

ಥಾಣೆ ಪಕ್ಕದ ಪ್ರದೇಶದಿಂದ ಬಂಧಿಸಲ್ಪಟ್ಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ ಆರೋಪಿ ಬಾಂಗ್ಲಾದೇಶದವನಾಗಿದ್ದು, ಭಾರತಕ್ಕೆ ಪ್ರವೇಶಿಸಿದ ನಂತರ ತನ್ನ ಹೆಸರನ್ನು ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ನಿಂದ ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

ಥಾಣೆ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿಯ ಪ್ರಮುಖ ಆರೋಪಿಯನ್ನು ಥಾಣೆಯಲ್ಲಿ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆರೋಪಿ ಬಂಗಾಳದೇಶಿ ಪ್ರಜೆ ಕಳ್ಳತನದ ಉದ್ದೇಶದಿಂದ ನಟನ ಮನೆಗೆ ಪ್ರವೇಶಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಥಾಣೆ ಪಕ್ಕದ ಪ್ರದೇಶದಿಂದ ಬಂಧಿಸಲ್ಪಟ್ಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ ಆರೋಪಿ ಬಾಂಗ್ಲಾದೇಶದವನಾಗಿದ್ದು, ಭಾರತಕ್ಕೆ ಪ್ರವೇಶಿಸಿದ ನಂತರ ತನ್ನ ಹೆಸರನ್ನು ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ನಿಂದ ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಅಲಿಯಾಸ್‌ಗಳನ್ನು ಆತ ಬಳಸುತ್ತಿದ್ದ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ತಾನು ಕೃತ್ಯ ಎಸಗಿರುವುದಾಗಿ ಆರೋಪಿ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ರೆಸ್ಟೋರೆಂಟ್‌ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ್ ದಾಸ್ ಎಂಬಾತನನ್ನು ಬಂಧಿಸಲಾಗಿದೆ. ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಅಲಿಯಾಸ್‌ಗಳನ್ನು ಬಳಸುತ್ತಿದ್ದ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಪ್ರಸ್ತುತ ಖಾರ್ ಪೊಲೀಸ್ ಠಾಣೆಯಲ್ಲಿ ಬಂಧನದಲ್ಲಿರಿಸಲಾಗಿದೆ.

ಬಾಲಿವುಡ್ ನ ಹೈ ಪ್ರೊಫೈಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಬಂಧನಗಳ ನಂತರ ಈ ಬಂಧನವಾಗಿದೆ. ನಿನ್ನೆ ಶನಿವಾರ, ಮುಂಬೈ ಪೊಲೀಸರು ಛತ್ತೀಸ್‌ಗಢದಲ್ಲಿ ಮತ್ತೊಬ್ಬ ಶಂಕಿತ ಆಕಾಶ್ ಕನೋಜಿಯಾ ಎಂಬಾತನನ್ನು ಬಂಧಿಸಿದರು. ಸುಮಾರು 32 ವರ್ಷ ವಯಸ್ಸಿನವನೆಂದು ನಂಬಲಾದ ಕನೋಜಿಯಾ ಜ್ಞಾನೇಶ್ವರಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ರಾಯ್‌ಪುರ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ತಡೆಹಿಡಿದು ಬಂಧಿಸಿದೆ.

ನಂತರ ಆತನನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಯಿತು. ಈತನನ್ನು ತೀವ್ರ ವಿಚಾರಣೆ ನಡೆಸಿದಾಗ ಸೈಫ್ ಮೇಲಿನ ದಾಳಿಯಲ್ಲಿ ಭಾಗಿಯಾಗಿಲ್ಲ ಎಂದು ತಿಳಿದುಬಂದಿದೆ. ಈ ಹಿಂದೆ, ಮುಂಬೈನಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗಿತ್ತು, ಆದರೆ ಈ ವ್ಯಕ್ತಿಗೂ ದಾಳಿ ಘಟನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಬಂಧನಗಳ ನಂತರ ಈ ಬಂಧನ ನಡೆದಿದೆ. ಶನಿವಾರ, ಮುಂಬೈ ಪೊಲೀಸರು ಛತ್ತೀಸ್‌ಗಢದಲ್ಲಿ ಮತ್ತೊಬ್ಬ ಶಂಕಿತ ಆಕಾಶ್ ಕನೋಜಿಯಾ ಅವರನ್ನು ಬಂಧಿಸಿದರು. ಸುಮಾರು 32 ವರ್ಷ ವಯಸ್ಸಿನವನೆಂದು ನಂಬಲಾದ ಕನೋಜಿಯಾ ಅವರನ್ನು ಜ್ಞಾನೇಶ್ವರಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ರಾಯ್‌ಪುರ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ತಡೆಹಿಡಿಯಿತು.

ನಂತರ ಆತನನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಯಿತು. ಆದಾಗ್ಯೂ, ಹೆಚ್ಚಿನ ತನಿಖೆಯಲ್ಲಿ ಆತ ದಾಳಿಯಲ್ಲಿ ಭಾಗಿಯಾಗಿಲ್ಲ ಎಂದು ತಿಳಿದುಬಂದಿದೆ.

ಕಳೆದ ಗುರುವಾರ ನಸುಕಿನ ಜಾವ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ವೆಸ್ಟ್ ಮನೆಯಲ್ಲಿ ಕಳ್ಳತನ ಯತ್ನದ ವೇಳೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. 54 ವರ್ಷದ ನಟನ ಮನೆಯಲ್ಲಿ ನಡೆದ ದಾಳಿಯಲ್ಲಿ ಅವರ ಕುತ್ತಿಗೆ ಮತ್ತು ಬೆನ್ನುಮೂಳೆಯ ಬಳಿ ಸೇರಿದಂತೆ ಹಲವು ಭಾಗಗಳಿಗೆ ಇರಿತದ ಗಾಯಗಳಾಗಿವೆ. ಅವರನ್ನು ತಕ್ಷಣವೇ ಆಟೋರಿಕ್ಷಾದಲ್ಲಿ ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ಮಾಡಿ ಅಪಾಯದಿಂದ ಪಾರಾಗಿದ್ದಾರೆ.

ಪ್ರಕರಣದಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ದಾಳಿಕೋರ ಸೈಫ್ ಅಲಿ ಖಾನ್ ಅವರ ಕಿರಿಯ ಮಗ ಜಹಾಂಗೀರ್ ಅವರ ಕೋಣೆಗೆ ಪ್ರವೇಶಿಸಿದಾಗ ಮನೆಯ ಸಹಾಯಕರು ನೋಡಿದ್ದಾರೆ. ನಂತರ ತೀವ್ರ ಗದ್ದಲ ನಡೆದು ಮನೆಯವರೆಲ್ಲಾ ಭಯಭೀತರಾದರು. ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಖಾನ್ ಜೆಹ್ ಕೋಣೆಗೆ ಧಾವಿಸಿದರು ಎಂದು ದೂರುದಾರರು ತಿಳಿಸಿದ್ದಾರೆ. ಸೈಫ್ ಒಳನುಗ್ಗುವವರನ್ನು ತಡೆದಾಗ ಗಲಾಟೆಯಲ್ಲಿ ಗಾಯಗೊಂಡಿದ್ದಾರೆ.

ನಿನ್ನೆ ಮುಂಬೈ ಪೊಲೀಸರಿಗೆ ಹೇಳಿಕೆ ನೀಡಿದ ಕರೀನಾ ಕಪೂರ್ ಖಾನ್, ಒಳನುಗ್ಗಿದವನು ಆಕ್ರಮಣಕಾರಿಯಾಗಿ ವರ್ತಿಸಿದ್ದನು. ಆದರೆ ತೆರೆದ ಸ್ಥಳದಲ್ಲಿ ಇರಿಸಲಾಗಿದ್ದ ಆಭರಣಗಳನ್ನು ಮುಟ್ಟಿರಲಿಲ್ಲ ಎಂದು ಉಲ್ಲೇಖಿಸಿದ್ದಾರೆ.ಈ ಮಧ್ಯೆ ಸೈಫ್ ಆಲಿಖಾನ್ ಆರೋಗ್ಯ ಸುಧಾರಿಸುತ್ತಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ ಎಂದು ಲೀಲಾವತಿ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ. ನಿತಿನ್ ಡಾಂಗೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT