ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ  
ಬಾಲಿವುಡ್

ನಟಿ ಕಿಯಾರಾ ಅಡ್ವಾಣಿ, ಸಿದ್ದಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ; ಮನೆಯಲ್ಲಿ ಸಂಭ್ರಮ

ನಟಿಗೆ ಆಗಸ್ಟ್‌ನಲ್ಲಿ ಹೆರಿಗೆಯಾಗಬೇಕಿತ್ತು, ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಟಿ ಕಿಯಾರಾ ಅಡ್ವಾಣಿ ಹಾಗೂ ಪತಿ ಸಿದ್ದಾರ್ಥ್ ಮಲ್ಹೋತ್ರಾ ಮನೆಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಈ ದಂಪತಿ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆಬಾಲಿವುಡ್ ನಟರಾದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಹೆಣ್ಣು ಮಗುವಿಗೆ ತಂದೆ-ತಾಯಿಯಾಗಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ನಟಿಗೆ ಆಗಸ್ಟ್‌ನಲ್ಲಿ ಹೆರಿಗೆಯಾಗಬೇಕಿತ್ತು, ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ವಾರ, ಸಿದ್ಧಾರ್ಥ್ ಮತ್ತು ಕಿಯಾರಾ ಮುಂಬೈನ ಕ್ಲಿನಿಕ್ ಒಂದರಲ್ಲಿ ಕಾಣಿಸಿಕೊಂಡಿದ್ದರು. ಸಿದ್ಧಾರ್ಥ್ ಅವರ ತಾಯಿ ರಿಮ್ಮಾ ಮಲ್ಹೋತ್ರಾ ಮತ್ತು ಕಿಯಾರಾ ಅವರ ಪೋಷಕರು ಜೆನೆವೀವ್ ಮತ್ತು ಜಗದೀಪ್ ಅಡ್ವಾಣಿ ಅವರೊಂದಿಗೆ ಆಸ್ಪತ್ರೆಯಲ್ಲಿದ್ದಾರೆ.

ಕಿಯಾರಾ ಅವರು ಕನ್ನಡದ ‘ಟಾಕ್ಸಿಕ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್​ ದಾಸ್ ನಿರ್ದೇಶನ ಇದೆ. ಅವರು ಈ ಚಿತ್ರದ ಶೂಟಿಂಗ್ ಮುಗಿಯುವ ಮೊದಲೇ ಪ್ರೆಗ್ನೆನ್ಸಿಗೆ ಪ್ಲ್ಯಾನ್ ಮಾಡಿದ್ದರು. ಅವರು ತಮ್ಮ ಭಾಗದ ಶೂಟಿಂಗ್ ಮುಗಿಸಿಕೊಟ್ಟಿದ್ದಾರೆ. 2023ರ ಫೆಬ್ರವರಿ ತಿಂಗಳಲ್ಲಿ ಇವರು ವಿವಾಹ ಆಗಿದ್ದರು. ಮದುವೆಯಾದ ಸುಮಾರು ಎರಡೂವರೆ ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದಾರೆ.

ಕಿಯಾರಾ ಅಡ್ವಾಣಿ ಅವರಿಗೆ ಚಿತ್ರರಂಗದಲ್ಲಿ ಈಗಲೂ ಬೇಡಿಕೆ ಇದೆ. ಸದ್ಯ ಅವರು ಮಗು ಜನಿಸಿದ ಬಳಿಕ ಒಂದು ಗ್ಯಾಪ್ ಪಡೆಯಲಿದ್ದಾರೆ. ಜೂನಿಯರ್ ಎನ್​ಟಿಆರ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್ 2’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಚಿತ್ರ ಆಗಸ್ಟ್​ 14ರಂದು ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭ.. ಸುಳ್ಳು ಸುದ್ದಿ ಹರಡಿದ್ರೆ ಕೇಸ್ ಹಾಕ್ತೀವಿ': ಸಿಎಂ ಸಿದ್ದರಾಮಯ್ಯ ಘೋಷಣೆ

ದೀಪಾವಳಿ ಹಬ್ಬದಂದೆ ಘೋರ ಘಟನೆ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!

ರಾಜ್ಯ ಸರ್ಕಾರಕ್ಕೆ ಸೆಡ್ಡು: ಕಲಬುರಗಿಯಲ್ಲಿ ನಡೆದ RSS ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ವೈದ್ಯ, Congress ಕಾರ್ಯಕರ್ತರು!

ತಮ್ಮ ಪಕ್ಷದ ಡಿಸಿಎಂಗೆ ಮತ ಹಾಕಬೇಡಿ ಎಂದು ಬಿಹಾರಿಗಳಿಗೆ ಬಿಜೆಪಿ ನಾಯಕ ಮನವಿ!

'96 ಲಕ್ಷ ನಕಲಿ ಮತದಾರರ ಸೇರ್ಪಡೆ': ಚುನಾವಣಾ ಆಯೋಗದ ವಿರುದ್ಧ ರಾಜ್ ಠಾಕ್ರೆ ಕಿಡಿ

SCROLL FOR NEXT