ತನುಶ್ರೀ ದತ್ತಾ 
ಬಾಲಿವುಡ್

ನನ್ನ ಮನೆಯಲ್ಲೇ ನನಗೆ ಕಿರುಕುಳ; ದಯವಿಟ್ಟು ಯಾರಾದರೂ ಸಹಾಯ ಮಾಡಿ: ವಿಡಿಯೋ ಮಾಡಿ ಅಂಗಲಾಚಿದ ನಟಿ ತನುಶ್ರೀ ದತ್ತಾ!

ನಾನು ಈ ಕಿರುಕುಳದಿಂದ ಬೇಸತ್ತು ಹೋಗಿದ್ದೇನೆ. ಇದು 2018 ರಿಂದ ನಡೆಯುತ್ತಿದೆ. ಕೊನೆಗೆ ಬೇಸತ್ತು ಪೊಲೀಸರಿಗೆ ಫೋನ್ ಮಾಡಿದ್ದೆ. ದಯವಿಟ್ಟು ಯಾರಾದರೂ ನನಗೆ ಸಹಾಯ ಮಾಡಿ.

ಮುಂಬೈ: ಬಾಲಿವುಡ್ ನಟಿ ತನುಶ್ರೀ ದತ್ತಾ ಶಾಕಿಂಗ್ ವೀಡಿಯೋ ಹಂಚಿಕೊಂಡಿದ್ದಾರೆ. ನನ್ನ ಮನೆಯಲ್ಲೇ ನನಗೆ ಕಿರುಕುಳ ಕೊಡುತ್ತಿದ್ದಾರೆ. ಯಾರಾದರೂ ಕಾಪಾಡಿ ಎಂದು ವೀಡಿಯೋ ಮಾಡಿ ಅತ್ತಿದ್ದಾರೆ. ಕೆಲ ವರ್ಷಗಳಿಂದ ನನಗೆ ಹೀಗೆ ಹಿಂಸೆ ಕೊಡುತ್ತಿದ್ದಾರೆ. ಮನೆ ಕೆಲಸದವರನ್ನು ಸೇರಿಸಿಕೊಂಡರೆ ಅವ್ರು ನನ್ನ ವಸ್ತುಗಳನ್ನು ಕದಿಯುತ್ತಾರೆ ಎಂದು ತನುಶ್ರೀ ಹೇಳಿದ್ದಾರೆ.

ನಾನು ಈ ಕಿರುಕುಳದಿಂದ ಬೇಸತ್ತು ಹೋಗಿದ್ದೇನೆ. ಇದು 2018 ರಿಂದ ನಡೆಯುತ್ತಿದೆ. ಕೊನೆಗೆ ಬೇಸತ್ತು ಪೊಲೀಸರಿಗೆ ಫೋನ್ ಮಾಡಿದ್ದೆ. ದಯವಿಟ್ಟು ಯಾರಾದರೂ ನನಗೆ ಸಹಾಯ ಮಾಡಿ. ತಡವಾಗುವ ಮುನ್ನ ಏನಾದರೂ ಮಾಡಿ" ಎಂದು ಕ್ಯಾಪ್ಷನ್ ಬರೆದು ಇನ್‌ಸ್ಟಾಗ್ರಾಮ್‌ನಲ್ಲಿ ತನುಶ್ರೀ ದತ್ತಾ ವೀಡಿಯೋ ಪೋಸ್ಟ್ ಮಾಡಿದ್ದಾರೆ.

ನನ್ನ ಮನೆಯಲ್ಲೇ ನನಗೆ ಕಿರುಕುಳ ನೀಡಲಾಗುತ್ತಿದೆ. ಈ ಬಗ್ಗೆ ನಾನು ಪೊಲೀಸರಿಗೆ ಕರೆ ಮಾಡಿ ಹೇಳಿದ್ದೇನೆ. ಠಾಣೆಗೆ ಬಂದು ದೂರು ದಾಖಲಿಸುವಂತೆ ಪೊಲೀಸರು ನನಗೆ ಹೇಳಿದ್ದಾರೆ. ನನಗೆ ಆರೋಗ್ಯ ಸರಿಯಿಲ್ಲ. ಕಳೆದ ಐದು ವರ್ಷಗಳಿಂದ ತುಂಬಾ ಕಿರುಕುಳ ಅನುಭವಿಸುತ್ತಿದ್ದು, ನನ್ನ ಆರೋಗ್ಯ ಸಂಪೂರ್ಣ ಹದಗೆಟ್ಟಿದೆ ಎಂದು ಹೇಳಿಕೊಂಡಿದ್ದಾರೆ.

ನನ್ನ ಮನೆಯ ಹೊರಗಿನಿಂದ ಜೋರಾದ ಶಬ್ದ ಕೇಳಿಬರುತ್ತದೆ. ಒಮ್ಮೊಮ್ಮೆ ಮನೆಯ ಬಾಗಿಲು ಬಡಿಯುತ್ತಾರೆ. ಮನೆ ಕೆಲಸಕ್ಕೆಂದು ಬಂದು ಕಳ್ಳತನ ಮಾಡುತ್ತಾರೆ. ಈ ಬಗ್ಗೆ ಕಟ್ಟಡದ ಆಡಳಿತ ಮಂಡಳಿಗೆ ತಿಳಿಸಿದ್ದೇನೆ. ಆದರೆ, ಅದರಿಂದ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ನನಗೆ ಯಾವುದೇ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಕೆಲಸದವರ ಮೇಲೂ ನಂಬಿಕೆ ಕಳೆದುಕೊಂಡಿದ್ದರಿಂದ ಕೆಲಸಕ್ಕಾಗಿ ಯಾರನ್ನು ನೇಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಸಮಸ್ಯೆ ನಡುವೆಯೇ ಮನೆಯ ಎಲ್ಲಾ ಕೆಲಸವನ್ನು ನಾನೇ ಮಾಡಿಕೊಳ್ಳುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಕಿರುಕುಳಗಳ ನಡುವೆಯೇ ನಾನು ಬದುಕು ಸಾಗಿಸುತ್ತಿದ್ದೇನೆ. ಇದರಿಂದ ನನ್ನ ಮನಸ್ಸನ್ನು ಬೇರೆಡೆ ಸೆಳೆಯಲು ಪ್ರಯತ್ನ ಮಾಡುತ್ತಿದ್ದೇನೆ. ಹೊರಗಿನ ಶಬ್ಧ ಕೇಳದಿರಲೆಂದು ಹೆಡ್‌ಫೋನ್‌ ಹಾಕಿಕೊಂಡೇ ಕುಳಿತುಕೊಳ್ಳುತ್ತೇನೆ ಎಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನನಗೆ ಸಹಾಯ ಬೇಕಿದೆ. ದಯವಿಟ್ಟು ಯಾರಾದರೂ ಸಹಾಯ ಮಾಡಿ ಎಂದು ಅಂಗಲಾಚಿದ್ದಾರೆ.

ಮನೆಯಲ್ಲೇ ಕಿರುಕುಳ ನೀಡುತ್ತಿದ್ದಾರೆ ಎಂದು ತನುಶ್ರೀ ದತ್ತಾ ಹೇಳಿದ್ರು, ಯಾರು ಕಿರುಕುಳ ಕೊಡುತ್ತಿದ್ದಾರೆ ಎನ್ನುವುದನ್ನು ಬಹಿರಂಗ ಪಡಿಸಿಲ್ಲ. ಜಾರ್ಖಂಡ್ ಮೂಲದ ತನುಶ್ರೀ ಮಾಡೆಲ್ ಆಗಿ ಬಳಿಕ ಸಿನಿಮಾ ನಟಿಯಾಗಿ ಗುರ್ತಿಸಿಕೊಂಡಿದ್ದರು. 'ಆಶಿಕ್ ಬನಾಯ ಅಪ್ನೆ' ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಆಪರೇಷನ್ ಸಿಂಧೂರ ವೇಳೆಯ 'ಅಪವಿತ್ರ ಮೈತ್ರಿ'ಯನ್ನು ಸದ್ದಿಲ್ಲದೆ ಒಪ್ಪಿಕೊಂಡ ಮೋದಿ ಸರ್ಕಾರ! ಚೀನಾ ಆಕ್ರಮಣವನ್ನು ಕಾನೂನುಬದ್ಧಗೊಳಿಸುತ್ತಿದ್ದೆಯೇ? ಕಾಂಗ್ರೆಸ್

ಪರಸ್ಪರ ನಂಬಿಕೆ, ಗೌರವದ ಆಧಾರದ ಮೇಲೆ ಸಂಬಂಧ ಮುಂದುವರಿಸಲು ಬದ್ಧ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಪ್ರಧಾನಿ ಮೋದಿ

SCO ಶೃಂಗಸಭೆ: ಮೋದಿ ಭೇಟಿ ಹಿನ್ನೆಲೆ, ಅಮೆರಿಕದ ಸುಂಕಾಸ್ತ್ರ ವಿರುದ್ಧ ರಷ್ಯಾ ಅಧ್ಯಕ್ಷ ಪುಟಿನ್ ಕಿಡಿ! ಹೇಳಿದ್ದು ಏನು?

Pepsi To McDonald: ಸುಂಕ ಸಂಘರ್ಷದ ನಡುವೆ ಅಮೆರಿಕದ ದೈತ್ಯ ಕಂಪನಿಗಳಿಗೆ ಭಾರತದಲ್ಲಿ #Boycott ಬಿಸಿ!

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!

SCROLL FOR NEXT