ದೇಬ್ ಮುಖರ್ಜಿ  
ಬಾಲಿವುಡ್

ನಟಿ ಕಾಜೋಲ್ ಚಿಕ್ಕಪ್ಪ ಬಾಲಿವುಡ್ ಹಿರಿಯ ನಟ ದೇಬ್ ಮುಖರ್ಜಿ ನಿಧನ

ದೇಬ್ ಮುಖರ್ಜಿ ಬ್ರಹ್ಮಾಸ್ತ್ರ ಸಿನಿಮಾ ನಿರ್ದೇಶಕ ಅಯಾನ್ ಮುಖರ್ಜಿ ಅವರ ತಂದೆ. ದೇಬ್ ಮುಖರ್ಜಿ ಅಂತಿಮ ದರ್ಶನ ಪಡೆಯಲು ಅವರ ನಿವಾಸಕ್ಕೆ ಚಿತ್ರರಂಗದ ನಟ, ನಟಿಯರು ಆಗಮಿಸುತ್ತಿದ್ದಾರೆ.

ಬಾಲಿವುಡ್ ಹಿರಿಯ ನಟ ದೇಬ್ ಮುಖರ್ಜಿ ನಿಧನರಾಗಿದ್ದಾರೆ. 83ನೇ ವರ್ಷದ ದೇಬ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

ದೇಬ್ ಮುಖರ್ಜಿ ಬ್ರಹ್ಮಾಸ್ತ್ರ ಸಿನಿಮಾ ನಿರ್ದೇಶಕ ಅಯಾನ್ ಮುಖರ್ಜಿ ಅವರ ತಂದೆ. ದೇಬ್ ಮುಖರ್ಜಿ ಅಂತಿಮ ದರ್ಶನ ಪಡೆಯಲು ಅವರ ನಿವಾಸಕ್ಕೆ ಚಿತ್ರರಂಗದ ನಟ, ನಟಿಯರು ಆಗಮಿಸುತ್ತಿದ್ದಾರೆ. ಇಂದು ಸಂಜೆಯೇ ಮುಂಬೈನಲ್ಲಿ ನಟನ ಅಂತಿಮ ಸಂಸ್ಕಾರ ನಡೆಯಲಿದೆ. ದೇಬ್ ಮುಖರ್ಜಿ ನಟಿ ಕಾಜೋಲ್ ಅವರ ಚಿಕ್ಕಪ್ಪ.

ಅಭಿನೇತ್ರಿ, ಏಕ್ ಬಾರ್ ಮುಸ್ಕುರಾದೊ, ಆಸೂ ಬನ್ ಗಯೇ ಪೂಲ್ ಇನ್ನೂ ಕೆಲವು ಸಿನಿಮಾಗಳಲ್ಲಿ ದೇಬ್ ನಟಿಸಿದ್ದಾರೆ. 2009ರಲ್ಲಿ ಬಿಡುಗಡೆ ಆದ ಶಾಹಿದ್ ಕಪೂರ್ ನಟನೆಯ ‘ಕಮೀನೆ’ ಅವರ ಕೊನೆಯ ಸಿನಿಮಾ ಆಗಿತ್ತು. ಆ ನಂತರ ಸಿನಿಮಾರಂಗದಿಂದ ಅಂತರ ಕಾಯ್ದುಕೊಂಡರು.

ದೇಬ್ ಮುಖರ್ಜಿ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಯಲ್ಲಿ ಅನೇಕ ಬಾಲಿವುಡ್ ತಾರೆಯರು ಭಾಗಿಯಾಗುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್