ಅಭಿಷೇಕ್ ಬಚ್ಚನ್ 
ಬಾಲಿವುಡ್

ಐಶ್ವರ್ಯಾ ರೈ ಬೆನ್ನಲ್ಲೇ ಕೋರ್ಟ್​ ಮೆಟ್ಟಿಲೇರಿದ ಅಭಿಷೇಕ್​ ​: ನಕಲಿ ಅಶ್ಲೀಲ ವಿಡಿಯೋ, ಚಿತ್ರ ಬಳಕೆಗೆ ತಡೆ ಕೋರಿ ಮನವಿ!

ವೆಬ್‌ಸೈಟ್‌ಗಳು ಮತ್ತು ಆನ್‌ಲೈನ್ ವೇದಿಕೆಗಳು ತಮ್ಮ ಚಿತ್ರ, ಹೋಲಿಕೆ ಇರುವ ಚಿತ್ರ, ವ್ಯಕ್ತಿತ್ವ ಮತ್ತು ಲೈಂಗಿಕತೆಗೆ ಸಂಬಂಧಿಸಿದ ಕಂಟೆಂಟ್‌ಗಳೂ ಒಳಗೊಂಡಂತೆ ನಕಲಿ ವಿಡಿಯೊಗಳನ್ನು ಬಳಸದಂತೆ ನಿರ್ಬಂಧ ಹೇರುವಂತೆ ಒತ್ತಾಯಿಸಿದ್ದಾರೆ.

ನವದೆಹಲಿ: ತಮ್ಮ ಪ್ರಚಾರ ಮತ್ತು ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಬುಧವಾರ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ವೆಬ್‌ಸೈಟ್‌ಗಳು ಮತ್ತು ಆನ್‌ಲೈನ್ ವೇದಿಕೆಗಳು ತಮ್ಮ ಚಿತ್ರ, ಹೋಲಿಕೆ ಇರುವ ಚಿತ್ರ, ವ್ಯಕ್ತಿತ್ವ ಮತ್ತು ಲೈಂಗಿಕತೆಗೆ ಸಂಬಂಧಿಸಿದ ಕಂಟೆಂಟ್‌ಗಳೂ ಒಳಗೊಂಡಂತೆ ನಕಲಿ ವಿಡಿಯೊಗಳನ್ನು ಬಳಸದಂತೆ ನಿರ್ಬಂಧ ಹೇರುವಂತೆ ಒತ್ತಾಯಿಸಿದ್ದಾರೆ.

ಈ ನಡುವೆ ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಪೀಠವು ಬಚ್ಚನ್ ಪರ ವಕೀಲರಿಗೆ ಕೆಲ ಪ್ರಶ್ನೆಗಳನ್ನು ಹಾಕಿದ್ದು, ಅವುಗಳಿಗೆ ಉತ್ತರಿಸುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಮಧ್ಯಾಹ್ನ 2:30ಕ್ಕೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಪ್ರತಿವಾದಿಗಳು ನಟನ ಕೃತಕ ಬುದ್ಧಿಮತ್ತೆ ಆಧಾರಿತ ವಿಡಿಯೊಗಳು, ಸಹಿ ಮಾಡಿದ ನಕಲಿ ಫೋಟೊಗಳು ಹಾಗೂ ಲೈಂಗಿಕತೆಗೆ ಸಂಬಂಧಿಸಿದ ಕಂಟೆಂಟ್‌ಗಳನ್ನು ರಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಅಭಿಷೇಕ್ ಬಚ್ಚನ್ ಅವರು ‘ಬಾಲಿವುಡ್ ಟಿ-ಶಾಪ್’ ಹೆಸರಿನ ವೆಬ್​​ಸೈಟ್ ಒಂದರ ಮೇಲೆ ದಾವೆ ಹೂಡಿದ್ದು ತಮ್ಮ ಅನುಮತಿ ಇಲ್ಲದೆ, ತಮ್ಮ ಚಿತ್ರಗಳನ್ನು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಟಿ-ಶರ್ಟ್​, ಕಾಫಿ ಕಪ್​​ಗಳ ಮೇಲೆ ಇನ್ನೂ ಹಲವೆಡೆ ತಮ್ಮ ಚಿತ್ರಗಳನ್ನು ಅನುಮತಿ ಇಲ್ಲದೆ ಬಳಸಲಾಗಿರುವುದಾಗಿ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಅಭಿಷೇಕ್ ಪತ್ನಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಸಹ ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಮಂಗಳವಾರ ದೆಹಲಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

Asia Cup 2025: ಮೊದಲ ಪಂದ್ಯದಲ್ಲೇ India ಅತ್ಯುತ್ತಮ ಪ್ರದರ್ಶನ; 57 ರನ್‌ಗಳಿಗೆ UAE ಆಲೌಟ್!

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

ಗುಜರಾತ್ ಫ್ಲೋರೋ ಕೆಮಿಕಲ್ ಕಂಪನಿಯಲ್ಲಿ ವಿಷಕಾರಿ ಅನಿಲ ಸೋರಿಕೆ: ಓರ್ವ ಸಾವು, 12 ಮಂದಿ ಆಸ್ಪತ್ರೆಗೆ ದಾಖಲು

ಸಿದ್ದರಾಮಯ್ಯ ಸರ್ಕಾರದ ವಿರುದ್ಧ SC ಒಳಮೀಸಲಾತಿ ಕಿಚ್ಚು: ಫ್ರೀಡಂ ಪಾರ್ಕ್‌ನಲ್ಲಿ ಸ್ಪೃಶ್ಯ ಸಮುದಾಯದಿಂದ ಉಗ್ರ ಹೋರಾಟ, ಆತ್ಮಹತ್ಯೆಗೆ ಮಹಿಳೆ ಯತ್ನ!

SCROLL FOR NEXT