ಗೌರಿ ಸ್ಪ್ರಾಟ್ - ಆಮಿರ್ ಖಾನ್ 
ಬಾಲಿವುಡ್

3ನೇ ಮದುವೆಗೆ ರೆಡಿಯಾದ ಆಮಿರ್ ಖಾನ್! ಜುಲೈ 5 ರಂದು ಬೆಂಗಳೂರಿನ ಗೆಳತಿ ಜತೆ ನಿಖಾ; ಯಾರು ಈ ಗೌರಿ ಸ್ಪ್ರಾಟ್?

ಸೂಪರ್ ಸ್ಟಾರ್ ಅಮಿರ್ ಖಾನ್ ಅವರು ಈ ಹಿಂದೆ ರೀನಾ ದತ್ತಾ ಮತ್ತು ಕಿರಣ್ ರಾವ್ ಅವರನ್ನು ವಿವಾಹವಾಗಿದ್ದರು. ಇದೀಗ ಮೂರನೇ ಬಾರಿ ಗೌರಿ ಸ್ಪ್ರಾಟ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.

ಬಾಲಿವುಡ್‌ನಲ್ಲಿ ಲವ್, ಬ್ರೇಕಪ್, ಮದುವೆ ಹಾಗೂ ಡಿವೋರ್ಸ್‌ ತುಂಬಾನೇ ಮಾಮೂಲು. ಕೆಲವು ವರ್ಷಗಳ ಹಿಂದಷ್ಟೇ ಕಿರಣ್ ರಾವ್ ಅವರಿಗೆ ಡಿವೋರ್ಸ್‌ ಕೊಟ್ಟಿದ್ದ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದೇ ಖ್ಯಾತಿ ಪಡೆದಿರುವ ಬಾಲಿವುಡ್ ನಟ ಆಮಿರ್ ಖಾನ್ ಅವರು ಈಗ ಮತ್ತೊಮ್ಮೆ ತಮ್ಮ ವೈಯಕ್ತಿಕ ಜೀವನದ ಕಾರಣದಿಂದ ಸುದ್ದಿಯಲ್ಲಿದ್ದಾರೆ .

61 ವರ್ಷದ ಬಾಲಿವುಡ್ ನಟ ಅಮಿರ್ ಖಾನ್ ಅವರು ಜುಲೈ 5 ರಂದು ಖಾಸಗಿ ಸಮಾರಂಭದಲ್ಲಿ ಬೆಂಗಳೂರಿನ ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರನ್ನು ಮದುವೆಯಾಗಲಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ಈ ಮದುವೆ ಯಾವುದೇ ಅದ್ಧೂರಿ ಕಾರ್ಯಕ್ರಮವಲ್ಲದೆ, ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಡೆಯುವ ನೋಂದಣಿ ವಿವಾಹವಾಗಿರಲಿದೆ ಎಂದು ತಿಳಿದುಬಂದಿದೆ.

ಸೂಪರ್ ಸ್ಟಾರ್ ಅಮಿರ್ ಖಾನ್ ಅವರು ಈ ಹಿಂದೆ ರೀನಾ ದತ್ತಾ ಮತ್ತು ಕಿರಣ್ ರಾವ್ ಅವರನ್ನು ವಿವಾಹವಾಗಿದ್ದರು. ಇದೀಗ ಮೂರನೇ ಬಾರಿ ಗೌರಿ ಸ್ಪ್ರಾಟ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. 47 ವರ್ಷದ ಗೌರಿ ಸ್ಪ್ರಾಟ್ ಅವರು ಏಳು ವರ್ಷದ ಮಗುವಿನ ತಾಯಿ ಆಗಿದ್ದಾರೆ.

ಕಳೆದ ವರ್ಷ ತಮ್ಮ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅಮೀರ್ ಖಾನ್ ತಮ್ಮ ಬೆಂಗಳೂರಿನ ಗೆಳತಿಯನ್ನು ಮಾಧ್ಯಮಗಳಿಗೆ ಪರಿಚಯಿಸಿದ್ದರು.

ಪತ್ರಿಕಾಗೋಷ್ಠಿಯಲ್ಲಿ, ಗೌರಿ ತಮ್ಮ ನಿರ್ಮಾಣ ಸಂಸ್ಥೆಯೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಆಮಿರ್ ಖಾನ್ ಹೇಳಿದ್ದರು.

ಬಳಿಕ ಆಮಿರ್ ಖಾನ್ ಮತ್ತು ಗೌರಿ ಸ್ಪ್ರಾಟ್ ಅವರ ಸಂಬಂಧದ ಬಗ್ಗೆ ಹಲವು ಊಹಾಪೋಹಗಳು ಕೇಳಿಬರುತ್ತಿದ್ದವು. ಇದೀಗ ಆ ಸಂಬಂಧಕ್ಕೆ ಕಾನೂನುಬದ್ಧ ಮಾನ್ಯತೆ ನೀಡಲು ಇಬ್ಬರೂ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಈ ಬೆಳವಣಿಗೆ ಬಾಲಿವುಡ್ ಅಭಿಮಾನಿಗಳಲ್ಲಿ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಗೌರಿ ಸ್ಪ್ರಾಟ್ ಯಾರು?

ಗೌರಿ ಸ್ಪ್ರಾಟ್ ಅವರು ಮೂಲತಃ ಬೆಂಗಳೂರಿನವರು ಮತ್ತು ತಮ್ಮ ಜೀವನದ ಬಹುಪಾಲು ಕಾಲವನ್ನು ಈ ನಗರದಲ್ಲಿ ಕಳೆದಿದ್ದಾರೆ. ಅವರು ಬೆಂಗಳೂರಿನಲ್ಲಿ ಸಲೂನ್ ಹೊಂದಿದ್ದ ರೀಟಾ ಸ್ಪ್ರಾಟ್ ಅವರ ಮಗಳು.

ಗೌರಿ ಅವರ ಲಿಂಕ್ಡ್‌ಇನ್ ಪ್ರೊಫೈಲ್ ಪ್ರಕಾರ, ಗೌರಿ ಬ್ಲೂ ಮೌಂಟೇನ್ ಶಾಲೆಯಲ್ಲಿ ಓದಿದ್ದು, 2004 ರಲ್ಲಿ ಲಂಡನ್ ವಿಶ್ವವಿದ್ಯಾಲಯದಲ್ಲಿ ಆರ್ಟ್ಸ್‌ನಲ್ಲಿ ಫ್ಯಾಷನ್ ಕೋರ್ಸ್, ಎಫ್‌ಡಿಎ ಸ್ಟೈಲಿಂಗ್ ಮತ್ತು ಫೋಟೋಗ್ರಫಿಯನ್ನು ಪೂರ್ಣಗೊಳಿಸಿದ್ದಾರೆ.

ಪ್ರೊಫೈಲ್ ಪ್ರಕಾರ, ಅವರು ಪ್ರಸ್ತುತ ಮುಂಬೈನಲ್ಲಿ ಬಿಬ್ಲಂಟ್ ಸಲೂನ್ ಅನ್ನು ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!