ದಿಶಾ ಪಟಾನಿ ಹಾಗೂ ಮೌನಿ ರಾಯ್ 
ಬಾಲಿವುಡ್

ನಾನು Gay ಅಲ್ಲ, ದಿಶಾ ಪಟಾನಿ ನನ್ನ ಆಪ್ತ ಸ್ನೇಹಿತೆ ಮಾತ್ರ: ಸೋಶಿಯಲ್ ಮೀಡಿಯಾ ಗಾಸಿಪ್‌ಗೆ ನಟಿ ಮೌನಿ ರಾಯ್ ಬ್ರೇಕ್

ಬಾಲಿವುಡ್ ನಟಿ ಮೌನಿ ರಾಯ್ ಮತ್ತು ದಿಶಾ ಪಟಾನಿ ನಡುವಿನ ಆತ್ಮೀಯ ಸ್ನೇಹದ ಬಗ್ಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಮೌನಿ ರಾಯ್ ಸ್ಪಷ್ಟನೆ ನೀಡಿದ್ದಾರೆ.

ನಾನೇನು 'ಗೇ' (ಸಲಿಂಗಕಾಮಿ) ಅಲ್ಲ, ದಿಶಾ ಪಟಾನಿ ನನ್ನ ಆಪ್ತ ಸ್ನೇಹಿತೆಯಷ್ಟೇ ಎಂದು ಬಾಲಿವುಡ್ ನಟಿ ಮೌನಿ ರಾಯ್ ಅವರು ಸ್ಪಷ್ಟಪಡಿಸಿದ್ದಾರೆ.

ಬಾಲಿವುಡ್ ನಟಿ ಮೌನಿ ರಾಯ್ ಮತ್ತು ದಿಶಾ ಪಟಾನಿ ನಡುವಿನ ಆತ್ಮೀಯ ಸ್ನೇಹದ ಬಗ್ಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಮೌನಿ ರಾಯ್ ಸ್ಪಷ್ಟನೆ ನೀಡಿದ್ದಾರೆ. ಇಬ್ಬರೂ ಪ್ರೇಮ ಸಂಬಂಧದಲ್ಲಿದ್ದಾರೆ ಎಂಬ ಊಹಾಪೋಹಗಳನ್ನು ಅವರು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

ಈ ಕುರಿತು ಮಾತನಾಡಿರುವ ಮೌನಿ ರಾಯ್, ದಿಶಾ ಪಟಾನಿ ತಮ್ಮ ಜೀವನದ ವಿವಿಧ ಹಂತಗಳಲ್ಲಿ ಬೆಂಬಲವಾಗಿ ನಿಂತಿರುವ ಆಪ್ತ ಸ್ನೇಹಿತೆ ಮಾತ್ರ ಎಂದು ಹೇಳಿದ್ದಾರೆ.

“ದಿಶಾ ನನ್ನ ಒಳ್ಳೆಯ ಸ್ನೇಹಿತೆ. ಜೀವನದ ಸುಖ-ದುಃಖದ ಕ್ಷಣಗಳಲ್ಲಿ ನನಗೆ ಬೆಂಬಲ ನೀಡುವ ವ್ಯಕ್ತಿ ಅಷ್ಟೇ,” ಎಂದು ತಿಳಿಸಿದ್ದಾರೆ.

ಇಬ್ಬರು ನಟಿಯರು ಒಟ್ಟಿಗೆ ಕಾಣಿಸಿಕೊಳ್ಳುವುದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳು ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುವುದು ಕೆಲವರಲ್ಲಿ ಅನುಮಾನಗಳಿಗೆ ಕಾರಣವಾಗಿತ್ತು. ಆದರೆ, ಇಂತಹ ಸ್ನೇಹವನ್ನು ತಪ್ಪಾಗಿ ಅರ್ಥೈಸಿ ಸಂಚಲನಕಾರಿ ಸುದ್ದಿಗಳನ್ನು ಸೃಷ್ಟಿಸುವುದು ಸರಿಯಲ್ಲ ಎಂದು ಮೌನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾನು ಗೇ ಅಲ್ಲ. ಕೇವಲ ಫೋಟೋಗಳು, ವಿಡಿಯೋಗಳು ಅಥವಾ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದೇವೆ ಎಂಬ ಕಾರಣಕ್ಕೆ ಸಂಬಂಧಗಳ ಬಗ್ಗೆ ನಿರ್ಧಾರಕ್ಕೆ ಬರಬಾರದು,” ಎಂದು ಹೇಳಿದ್ದಾರೆ.

ಮೌನಿ ರಾಯ್ ಮತ್ತು ದಿಶಾ ಪಟಾನಿ ಹಲವು ವರ್ಷಗಳಿಂದ ಉತ್ತಮ ಸ್ನೇಹಿತರಾಗಿದ್ದು, ಪರಸ್ಪರ ಬೆಂಬಲ ಮತ್ತು ವಿಶ್ವಾಸದ ಬಾಂಧವ್ಯವನ್ನು ಹೊಂದಿದ್ದಾರೆ. ವದಂತಿಗಳ ನಡುವೆಯೂ ತಮ್ಮ ಸ್ನೇಹವನ್ನು ಇಬ್ಬರೂ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಗಜಿನಿ, ಲಗಾನ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ಅಶ್ಲೀಲ ಜೋಕ್‌ಗಳು ಸ್ವೀಕಾರಾರ್ಹವಲ್ಲ; ಉದಯನಿಧಿ ವಿರುದ್ಧದ ಪೊಲೀಸರ ಕ್ರಮ ಸರಿಯಾಗಿದೆ: ನಟಿ ಕಂಗನಾ ರಣಾವತ್

ದ್ವೇಷ ಭಾಷಣ: ಪಿಎಫ್‌ಐ ನಾಯಕನಿಗೆ ಆರು ತಿಂಗಳು ಜೈಲು ಶಿಕ್ಷೆ