ಕಾಕ್ಟೇಲ್ 2 ಪೋಸ್ಟರ್ 
ಬಾಲಿವುಡ್

ಶಾಹಿದ್ ಕಪೂರ್-ರಶ್ಮಿಕಾ ಅಭಿನಯದ 'ಕಾಕ್ಟೇಲ್ 2' ಜೂನ್ 19 ರಂದು ಬಿಡುಗಡೆ

ಹೋಮಿ ಅದಜಾನಿಯಾ ನಿರ್ದೇಶನದ ಹಾಗೂ ದಿನೇಶ್ ವಿಜನ್ ಅವರ ‘ಮ್ಯಾಡಾಕ್ ಫಿಲ್ಮ್ಸ್’ ನಿರ್ಮಾಣ ಮಾಡಿರುವ ‘ಕಾಕ್​​ಟೇಲ್ 2’ ಚಿತ್ರದ ಟೀಸರ್ ಮುಂದಿನ ವಾರ ಬಿಡುಗಡೆಯಾಗಲಿದೆ.

ಮುಂಬೈ: ಬಾಲಿವುಡ್ ನಟ ಶಾಹಿದ್ ಕಪೂರ್, ಕೃತಿ ಸನೋನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಕಾಕ್‌ಟೇಲ್ 2 ಸಿನಿಮಾ ಜೂನ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

2012 ರಲ್ಲಿ ಬಿಡುಗಡೆ ಆಗಿ ಬ್ಲಾಕ್‌ಬಸ್ಟರ್ ಆಗಿದ್ದ ‘ಕಾಕ್‌ಟೇಲ್’ ಸಿನಿಮಾದ ಸೀಕ್ವೆಲ್ ಆಗಿರುವ ‘ಕಾಕ್‌ಟೇಲ್ 2 ’ಚಿತ್ರದ ಬಿಡುಗಡೆ ದಿನಾಂಕ ಹಾಗೂ ಟೀಸರ್ ರಿಲೀಸ್ ದಿನಾಂಕಗಳನ್ನು ಇಂದು ಘೋಷಿಸಲಾಗಿದೆ.

ಹೋಮಿ ಅದಜಾನಿಯಾ ನಿರ್ದೇಶನದ ಹಾಗೂ ದಿನೇಶ್ ವಿಜನ್ ಅವರ ‘ಮ್ಯಾಡಾಕ್ ಫಿಲ್ಮ್ಸ್’ ನಿರ್ಮಾಣ ಮಾಡಿರುವ ‘ಕಾಕ್​​ಟೇಲ್ 2’ ಚಿತ್ರದ ಟೀಸರ್ ಮುಂದಿನ ವಾರ ಬಿಡುಗಡೆಯಾಗಲಿದ್ದು, ಸಿನಿಮಾ ಜೂನ್ 19ರಂದು ವಿಶ್ವದಾದ್ಯಂತ ತೆರೆಕಾಣಲಿದೆ.

2012ರಲ್ಲಿ ತೆರೆಕಂಡ ಅದಜಾನಿಯಾ ಅವರ ಕಾಕ್‌ಟೇಲ್ ಸಿನಿಮಾನಲ್ಲಿ ದೀಪಿಕಾ ಪಡುಕೋಣೆ, ಸೈಫ್ ಅಲಿ ಖಾನ್ ಮತ್ತು ಡಿಯಾನಾ ಪೆಂಟಿ ಅಭಿನಯಿಸಿದ್ದರು.

ಈ ಚಿತ್ರವು ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗಳಿಕೆ ಮಾಡಿತ್ತು. 120 ಕೋಟಿ ರೂ.ಗಳಿಗೂ ಹೆಚ್ಚು ಕಲೆಕ್ಷನ್ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video