ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ‘ರಾಮಾಯಣ ಪಾರ್ಟ್ 1: ರೈಸ್ ಆಫ್ ಎ ಲೆಜೆಂಡ್’ ಸಿನಿಮಾ ನಿನ್ನೆ ಜಗತ್ತಿನಾದ್ಯಂತ ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇನ್ನು ಮೊದಲ ದಿನವೇ ಜಗತ್ತಿನಾದ್ಯಂತ 155 ಕೋಟಿಗೂ ಹೆಚ್ಚು ಗ್ರಾಸ್ ಕಲೆಕ್ಷನ್ ಮಾಡಿತ್ತು. ಮೊದಲ ದಿನ 200 ಕೋಟಿ ಗಡಿ ದಾಟಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಗಳಿಕೆಯಲ್ಲಿ ಕೊಂಚ ಹಿನ್ನಡೆಯಾಗಿತ್ತು.
ಆದರೆ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿರುವುದರಿಂದ ಇಂದು ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಭಾರತದಲ್ಲಿ ಬುಕ್ ಮೈ ಶೋನಲ್ಲೇ ಗಂಟೆಗೆ ಬರೋಬ್ಬರಿ 80 ಸಾವಿರಕ್ಕೂ ಹೆಚ್ಚು ಟಿಕೆಟ್ ಗಳು ಸೇಲಾಗುತ್ತಿವೆ. ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಮತ್ತು ರಾವಣನಾಗಿ ನಟ ಯಶ್ ಅಭಿನಯಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ.
ಇನ್ನು ದೀಪಾವಳಿಯ ಹಿನ್ನೆಲೆಯಲ್ಲಿ ಮಂಗಳವಾರದವರೆಗೆ ರಜಾದಿನಗಳು ಇರುವುದರಿಂದ ಚಿತ್ರದ ಗಳಿಕೆ ಮುಂದೆ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. 2000 ಕೋಟಿ ಬಿಗ್ ಬಜೆಟ್ ನ ರಾಮಾಯಣ ಭಾರತ ಸೇರಿದಂತೆ ವಿದೇಶಗಳಲ್ಲೂ ಅದ್ಧೂರಿಯಾಗಿ ಬಿಡುಗಡೆಯಾಗಿದೆ.