ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ: ರೈಸ್ ಆಫ್ ಎ ಲೆಜೆಂಡ್' ದೀಪಾವಳಿ ಹಬ್ಬದಂದು(ಭಾನುವಾರ) ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಗಳಿಕೆ ಕಂಡಿದ್ದು, ಭಾರತದಲ್ಲಿ 56.15 ಕೋಟಿ ರೂ. ಗಳಿಕೆ ಮಾಡಿ, ಹಬ್ಬದ ದಿನದಂದು 500 ಕೋಟಿ ರೂ. ಕ್ಲಬ್ ಸೇರಿದೆ.
ದೀಪಾವಳಿಗೂ ಮೂರು ದಿನ ಮೊದಲು ಬಿಡುಗಡೆಯಾದ ಬಾಲಿವುಡ್ ನಟ ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ರಾಮಾಯಣ' ಕೇವಲ ನಾಲ್ಕೇ ದಿನಗಳಲ್ಲಿ ಪ್ರೇಕ್ಷಕರ ಮನ ಗೆಲ್ಲುವುದರ ಜೊತೆಗೆ ಜಾಗತಿಕ ಮಟ್ಟದಲ್ಲಿ ಭರ್ಜರಿ ಕಮಾಯಿ ಮಾಡಿ ಹೊಸ ಇತಿಹಾಸ ಸೃಷ್ಟಿಸುತ್ತಿದೆ.
ಶನಿವಾರ ಚಿತ್ರದ ಗಳಿಕೆಯಲ್ಲಿ ಭರ್ಜರಿ ಏರಿಕೆ ಕಂಡುಬಂದಿದ್ದರೆ, ಭಾನುವಾರ ಕಲೆಕ್ಷನ್‌ನಲ್ಲಿ ಕೊಂಚ ಇಳಿಕೆ ದಾಖಲಾಗಿದೆ. ಆದರೂ ಬಾಕ್ಸ್ ಆಫೀಸ್ ಭರ್ಜರಿ ಕಲೆಕ್ಷನ್ ಮಾಡಿದೆ.
ಭಾನುವಾರ ‘ರಾಮಾಯಣ’ ಸಿನಿಮಾ ಭಾರತದಲ್ಲಿ ಎಲ್ಲಾ ಭಾಷೆಗಳಿಂದ ಒಟ್ಟು 56.15 ಕೋಟಿ (Net) ಗಳಿಕೆ ಮಾಡಿದೆ. ಇದರೊಂದಿಗೆ ಭಾರತದ ಒಟ್ಟು ಗ್ರಾಸ್ ಕಲೆಕ್ಷನ್ 66.95 ಕೋಟಿಗೆ ತಲುಪಿದೆ. ಶನಿವಾರದಂದು 69.80 ಕೋಟಿ ಕಲೆಕ್ಷನ್ ಮಾಡಿತ್ತು.
4 ದಿನಗಳ ಅಂತ್ಯಕ್ಕೆ ಚಿತ್ರದ ಭಾರತದ ಒಟ್ಟು ನೆಟ್ ಕಲೆಕ್ಷನ್ 238.85 ಕೋಟಿ ತಲುಪಿದ್ರೆ, ಗ್ರಾಸ್ ಕಲೆಕ್ಷನ್ 285.20 ರೂ. ಆಗಿದೆ. ಇನ್ನು ವಿದೇಶಿ ಮಾರುಕಟ್ಟೆಯಲ್ಲಿಯೂ ‘ರಾಮಾಯಣ’ ಉತ್ತಮ ಪ್ರದರ್ಶನ ಮುಂದುವರಿಸಿದೆ. 4ನೇ ದಿನ ವಿದೇಶಗಳಲ್ಲಿ 53 ಕೋಟಿ ಗಳಿಸಿದ್ದು, ಒಟ್ಟು ವಿದೇಶಿ ಗ್ರಾಸ್ ಕಲೆಕ್ಷನ್ 222 ಕೋಟಿಗೆ ಏರಿಕೆಯಾಗಿದೆ. ಇದರೊಂದಿಗೆ ಚಿತ್ರದ ವಿಶ್ವಾದ್ಯಂತ ಒಟ್ಟು ಗ್ರಾಸ್ ಕಲೆಕ್ಷನ್ 507.20 ಕೋಟಿಗೆ ತಲುಪಿದೆ ಎಂದು ವರದಿಯಾಗಿದೆ.