ರಾಮಾಯಣ ಚಿತ್ರದ ಶೂಟಿಂಗ್ ಸ್ಥಳದಲ್ಲಿ ಬೆಂಕಿ ಅವಘಡ 
ಬಾಲಿವುಡ್

ಯಶ್ ರಾವಣನಾಗಿ ನಟಿಸುತ್ತಿರುವ 'ರಾಮಾಯಣ' ಚಿತ್ರದ ಸೆಟ್‌ನಲ್ಲಿ ಭಾರಿ ಅಗ್ನಿ ಅವಘಡ! Video

ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಅಧ್ಯಕ್ಷ ಬಿ.ಎನ್. ತಿವಾರಿ ಈ ಘಟನೆಯನ್ನು ದೃಢಪಡಿಸಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ಕಾಣಿಸಿಕೊಳ್ಳುತ್ತಿರುವ 'ರಾಮಾಯಣ' ಚಿತ್ರದ ಸೆಟ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗೋರೆಗಾಂವ್ ಪೂರ್ವದ ಫಿಲ್ಮ್ ಸಿಟಿ ಪ್ರದೇಶದಲ್ಲಿ ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಚಿತ್ರೀಕರಣದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಅಧ್ಯಕ್ಷ ಬಿ.ಎನ್. ತಿವಾರಿ ಈ ಘಟನೆಯನ್ನು ದೃಢಪಡಿಸಿದ್ದಾರೆ. ರಿಲಯನ್ಸ್ ಮೀಡಿಯಾವರ್ಕ್ಸ್ ಬಳಿಯ 'ಪ್ರೈಮ್ ಫೋಕಸ್ ಸ್ಟುಡಿಯೋ'ದ ಹಿಂಭಾಗದಲ್ಲಿರುವ ತಾತ್ಕಾಲಿಕ ಚಿತ್ರೀಕರಣದ ಸೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ವೇಳೆ ವಿದ್ಯುತ್ ವೈರಿಂಗ್ ಮತ್ತು ಅಳವಡಿಕೆಗಳು, ಕೇಬಲ್‌ಗಳು, ಬಾಗಿಲುಗಳು, ಮರದ ಹಲಗೆಗಳು, ಎಸಿ (AC) ಘಟಕ, ಬಿದಿರು ಮತ್ತು ಪ್ಲಾಸ್ಟಿಕ್ ಸಾಮಗ್ರಿಗಳು, ಧ್ವನಿವರ್ಧಕ ಉಪಕರಣಗಳು ಹಾಗೂ ಇತರ ನಿರ್ಮಾಣ ಸಾಮಗ್ರಿಗಳು ಸೇರಿದಂತೆ ಚಿತ್ರೀಕರಣಕ್ಕೆ ಸಂಬಂಧಿಸಿದ ಹಲವು ವಸ್ತುಗಳು ಬೆಂಕಿಗೆ ಅಹುತಿಯಾಗಿವೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಮುಂಬೈ ಅಗ್ನಿಶಾಮಕ ದಳದ ತಂಡಗಳು ಬೆಂಕಿಯನ್ನು ನಿಯಂತ್ರಿಸಿವೆ. ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಈ ಪ್ರದೇಶದಲ್ಲಿ ಅನೇಕ ಸ್ಟುಡಿಯೋಗಳು ಮತ್ತು ನಿರ್ಮಾಣ ಸೆಟ್‌ಗಳಿವೆ. ಇದರಲ್ಲಿ 'ಕಲರ್ಸ್ ಟಿವಿ'ಯ 'ಧಮಾಲ್ ವಿತ್ ಪತಿ ಪತ್ನಿ ಔರ್ ಪಂಗಾ' (ಸೀಸನ್ 2) ಮತ್ತು 'ಎಂಟಿವಿ ಹಸಲ್' (MTV Hustle) ಕಾರ್ಯಕ್ರಮಗಳಿಗೆ ಬಳಸುವ ಸೆಟ್‌ಗಳು ಸೇರಿವೆ.

ಅದೃಷ್ಟವಶಾತ್, ಆ ಸಮಯದಲ್ಲಿ 'ಧಮಾಲ್ ವಿತ್ ಪತಿ ಪತ್ನಿ ಔರ್ ಪಂಗಾ' ಕಾರ್ಯಕ್ರಮದ ಚಿತ್ರೀಕರಣ ನಡೆಯುತ್ತಿರಲಿಲ್ಲ, ಆದರೆ 'ಎಂಟಿವಿ ಹಸಲ್' ಸೆಟ್‌ಗೆ ಬೆಂಕಿಯಿಂದ ಹಾನಿಯಾಗಿದೆ ಎಂದು ವರದಿಯಾಗಿದೆ. ಹಾನಿಯ ಪ್ರಮಾಣ ಮತ್ತು ಮುಂದಿನ ಚಿತ್ರೀಕರಣದ ಮೇಲೆ ಉಂಟಾದ ಪರಿಣಾಮಗಳ ಕುರಿತ ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ: ಇದು ನನ್ನ ವೈಯಕ್ತಿಕ ನಂಬಿಕೆ; ಡೊನಾಲ್ಡ್ ಟ್ರಂಪ್

ಸೌದಿ ಮಿಲಿಟರಿ ಕಾರ್ಯಾಚರಣೆಗೆ ಹೌತಿ ಬಂಡುಕೋರರ ತಿರುಗೇಟು: ರಿಯಾದ್ ವಿಮಾನ ನಿಲ್ದಾಣ, ಅರಾಮ್ಕೊ ಸಂಸ್ಕರಣಾಗಾರ ಗುರಿಯಾಗಿಸಿಕೊಂಡು ದಾಳಿ!

ರಾಜ್ಯದಲ್ಲಿ ಮಳೆ ಮತ್ತೆ ಚುರುಕು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಸಾಧ್ಯತೆ..!

ಬೆಂಗಳೂರಿನಲ್ಲಿ ವರುಣ ಆರ್ಭಟ: 17.3 ಮಿ.ಮೀ. ಮಳೆಗೆ ಬೆಂಗಳೂರು ತತ್ತರ; ಹಲವೆಡೆ ಜಲಾವೃತ, ಮರಗಳು ಧರೆಗೆ..!

ಸರ್ಕಾರದ ಬೊಕ್ಕಸಕ್ಕೆ ಕಿಕ್ ಕೊಟ್ಟ ಮದ್ಯ ಪ್ರಿಯರು: ಮಾರಾಟ ಶೇ.41ರಷ್ಟು ಹೆಚ್ಚಳ, ಅಬಕಾರಿ ಆದಾಯ ಭಾರೀ ಏರಿಕೆ..!