ಕಮಲ ಹಿಡಿಯಲಿದ್ದಾರಾ ಭಾಯಿಜಾನ್?  Online Desk
ಬಾಲಿವುಡ್

ಸಲ್ಮಾನ್ ಖಾನ್ ಬಿಜೆಪಿಗೆ ಶೀಘ್ರ ಸೇರ್ಪಡೆ? ಕಮಲನಾಯಕರೊಂದಿಗೆ ಭಾಯಿಜಾನ್ ಬ್ಯಾಕ್ ಟು ಬ್ಯಾಕ್ ಮೀಟಿಂಗ್! ಇಲ್ಲಿದೆ ಅಸಲಿ ಸತ್ಯ

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಶೀಘ್ರದಲ್ಲೇ ಕೇಸರಿಪಡೆ ಮೂಲಕ ರಾಜಕೀಯಕ್ಕೆ ಕಾಲಿಡಲಿದ್ದಾರೆಯೇ? ಇಂಥದ್ದೊಂದು ಪ್ರಶ್ನೆ ಮತ್ತು ಚರ್ಚೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಕಾವು ಪಡೆದುಕೊಂಡಿದೆ. ಆ ಕುರಿತ ಇನ್‌ಸೈಡ್ ಮಾಹಿತಿ ಇಲ್ಲಿದೆ:

ಮುಂಬೈ (ಮಹಾರಾಷ್ಟ್ರ): ಬಾಲಿವುಡ್‌ನ ಭಾಯಿಜಾನ್ ಖ್ಯಾತಿಯ ಸಲ್ಮಾನ್ ಖಾನ್ ಅವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಜೊತೆಗೆ, ಬಿಜೆಪಿಯೊಂದಿಗೆ ಮಾತ್ರವಲ್ಲದೆ, ಕಾಂಗ್ರೆಸ್, ಎನ್‌ಸಿಪಿ ಹಾಗೂ ಶಿವಸೇನೆಯ ಹಲವು ಪ್ರಮುಖ ನಾಯಕರೊಂದಿಗೂ ನಿಕಟ ಒಡನಾಟ ಹೊಂದಿದ್ದಾರೆ. ಅದರಂತೆ, ಈ ಹಿಂದೆ ತಮ್ಮ ಆಪ್ತ ಸ್ನೇಹಿತರು ಚುನಾವಣೆಗೆ ಸ್ಪರ್ಧಿಸಿದಾಗ ಅವರ ಪರವಾಗಿ ಪ್ರಚಾರ ಮಾಡಿದ್ದಾರೆಯೇ ಹೊರತು, ಎಂದಿಗೂ ಯಾವುದೇ ಪಕ್ಷದ ಬಾವುಟ ಹಿಡಿದು ರಾಜಕೀಯಕ್ಕೆ ಪ್ರವೇಶಿಸಿಲ್ಲ. ಆದರೆ, ಈಗ ಅದೇ ಸಲ್ಮಾನ್ ಖಾನ್ ಅವರು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಜೋರಾಗಿದೆ. ಆ ಕುರಿತ ವರದಿ ಇಲ್ಲಿದೆ:

ಕಮಲದ ಕೈ ಹಿಡಿಯುತ್ತಾರಾ ಭಾಯಿಜಾನ್?

ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಮುಂಬೈನ ತಮ್ಮ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ನಿವಾಸದಲ್ಲಿ, ಬಿಜೆಪಿಯ ಯುವ ಮೋರ್ಚಾ ರಾಷ್ಟ್ರೀಯ ಖಜಾಂಚಿ ಪಿ.ಎಂ. ಸಾಯಿ ಪ್ರಸಾದ್ ಮತ್ತು ಅವರ ಪತ್ನಿ ರುಕ್ಮಿಣಿ ಚೌಧರಿ ಅವರಿಗೆ ಭೋಜನದ ಆತಿಥ್ಯ ನೀಡಿದ್ದಾರೆ. ಇದರೊಂದಿಗೆ, ಸಾಯಿ ಪ್ರಸಾದ್ ಅವರು ಸಲ್ಮಾನ್ ಖಾನ್ ಜೊತೆಗಿನ ಭೇಟಿಯ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಸಲ್ಮಾನ್ ಖಾನ್ ಅವರ ಸರಳತೆ, ಆತ್ಮೀಯತೆ ಮತ್ತು ಅದ್ಭುತ ಆತಿಥ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇದರ ಬೆನಲ್ಲೇ, ಸಲ್ಮಾನ್ ಖಾನ್ ಅವರು ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದವು. ಆದರೆ, ಅಸಲಿ ಸತ್ಯ ಬೇರೆಯೇ ಇದೇ!

ಹೌದು, ಸಲ್ಮಾನ್ ಖಾನ್ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುತ್ತಿರುವ ಬಗ್ಗೆ ಅಥವಾ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸುತ್ತಿರುವ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಿಲ್ಲ. ಅದರಂತೆ, ಇದು ಕೇವಲ ಒಂದು ಸೌಜನ್ಯದ ಹಾಗೂ ಖಾಸಗಿ ಭೇಟಿಯಾಗಿದೆ. ಏತನ್ಮಧ್ಯೆ,  ಇತ್ತೀಚೆಗೆ ಬಿಜೆಪಿ ಶಾಸಕ ಆಶಿಶ್ ಶೆಲಾರ್ ಸೇರಿದಂತೆ ಹಲವು ನಾಯಕರು ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಬೀಯಿಂಗ್ ಹ್ಯೂಮನ್ ಸಂಸ್ಥೆಯ ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

11/9 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!