ನಟಿ ನೋರಾ ಫತೇಹಿ 
ಬಾಲಿವುಡ್

Nora Fatehi ಗೆ ಮತ್ತೆ ಸಂಕಷ್ಟ: ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣದಲ್ಲಿ ಪೊಲೀಸ್ ಸಮನ್ಸ್!

ಅಕ್ಟೋಬರ್ 16ರಂದು ಹೊರಡಿಸಿದ ಆದೇಶದಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಗಗನ್‌ದೀಪ್ ಸಿಂಗ್ ಅವರು ನೋರಾ ಫತೇಹಿಗೆ ಸಮನ್ಸ್ ಜಾರಿ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

ನವದೆಹಲಿ: ಈ ಹಿಂದೆ ಕೆಡಿ ಚಿತ್ರದ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬಾಲಿವುಡ್ ನಟಿ ನೋರಾ ಫತೇಹಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ದೆಹಲಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ಬಹುಕೋಟಿ ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ ವಂಚಕ ಸುಕೇಶ್ ಚಂದ್ರಶೇಖರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ನವೆಂಬರ್ 2ರಂದು ನ್ಯಾಯಾಲಯಕ್ಕೆ ಸಾಕ್ಷಿಯಾಗಿ ಹಾಜರಾಗುವಂತೆ ನಟಿ ನೋರಾ ಫತೇಹಿಗೆ ಸೂಚಿಸಲಾಗಿದೆ.

ಅಕ್ಟೋಬರ್ 16ರಂದು ಹೊರಡಿಸಿದ ಆದೇಶದಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಗಗನ್‌ದೀಪ್ ಸಿಂಗ್ ಅವರು ನೋರಾ ಫತೇಹಿಗೆ ಸಮನ್ಸ್ ಜಾರಿ ಮಾಡುವಂತೆ ನಿರ್ದೇಶನ ನೀಡಿದ್ದಾರೆ. ಪ್ರಕರಣದ ಮೂರನೇ ಪೂರಕ ಆರೋಪಪಟ್ಟಿಯಲ್ಲಿ (Third Supplementary Chargesheet) ನೋರಾ ಫತೇಹಿ ಅವರನ್ನು ಮೂರನೇ ಸಾಕ್ಷಿ (LW-3) ಎಂದು ಹೆಸರಿಸಲಾಗಿದೆ.

ನ್ಯಾಯಾಲಯದ ಆದೇಶದಲ್ಲಿ, "ನೋರಾ ಫತೇಹಿ ಅಲಿಯಾಸ್ ನೌರಾ ಫತೇಹಿ (ಮೂರನೇ ಪೂರಕ ಆರೋಪಪಟ್ಟಿಯಲ್ಲಿ ಪಟ್ಟಿ ಮಾಡಲಾದ ಸಾಕ್ಷಿ ಸಂಖ್ಯೆ 3) ಅವರಿಗೆ ನವೆಂಬರ್ 2ರಂದು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಬೇಕು" ಎಂದು ತಿಳಿಸಲಾಗಿದೆ.

ಕಾನೂನು ಪ್ರಕ್ರಿಯೆಯ ಪ್ರಕಾರ, ಆರೋಪಪಟ್ಟಿಯಲ್ಲಿ ಸಾಕ್ಷಿಗಳನ್ನು ಆರಂಭದಲ್ಲಿ 'ಲಿಸ್ಟೆಡ್ ವಿಟ್ನೆಸ್' (LW) ಎಂದು ಗುರುತಿಸಲಾಗುತ್ತದೆ. ಅವರು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನೀಡಿದ ಬಳಿಕ 'ಪ್ರಾಸಿಕ್ಯೂಷನ್ ವಿಟ್ನೆಸ್' (PW) ಎಂದು ಪರಿಗಣಿಸಲಾಗುತ್ತದೆ.

ಸುಕೇಶ್ ಚಂದ್ರಶೇಖರ್ ವಿರುದ್ಧದ ಸುಲಿಗೆ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರ ವಿಶೇಷ ಘಟಕ (Special Cell) ನಡೆಸುತ್ತಿದೆ. ಈ ಪ್ರಕರಣದ ವಿಚಾರಣೆಯ ಭಾಗವಾಗಿ ನೋರಾ ಫತೇಹಿ ಅವರನ್ನು ಸಾಕ್ಷಿಯಾಗಿ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Uttarakhand helicopter crash: ಛಿದ್ರ ಛಿದ್ರವಾಗಿ ಬಿದ್ದ ಹೆಲಿಕಾಪ್ಟರ್, ಸುಟ್ಟುಕರಕಲಾದ ಸ್ಥಿತಿಯಲ್ಲಿ ಐವರು ಕನ್ನಡಿಗರು ಸೇರಿದಂತೆ ಆರು ಮೃತದೇಹಗಳು ಪತ್ತೆ!

ನ.19ಕ್ಕೆ ನಟ ವಿಷ್ಣುವರ್ಧನ್, ನಟಿ ಬಿ.ಸರೋಜಾದೇವಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ ಪ್ರಶಸ್ತಿ' ಪ್ರದಾನ; ನಟ ರಜನಿಕಾಂತ್ ಕರೆಸಲು ಚಿಂತನೆ!

ಗೌರಿ ಲಂಕೇಶ್ ಹತ್ಯೆಯಿಂದ ಘಾಸಿಗೊಂಡ ಪ್ರಕಾಶ್ ರಾಜ್; ನಾನು ದೇವರನ್ನು ನಂಬುತ್ತೇನೆ, ಅವರು ನಂಬಲ್ಲ: ಪತ್ನಿ ಪೋನಿ ವರ್ಮಾ ಸಂವಾದ!

ಭಾನುವಾರ ಬೆಂಗಳೂರು - ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ; ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು ಮೆಟ್ರೋ ಕಿರುಕುಳ ಆರೋಪ: ಸೌಪಿಕ ಇನ್‌ಸ್ಟಾಗ್ರಾಂ ಖಾತೆಗೆ ಭರ್ಜರಿ ಫಾಲೋವರ್ಸ್; ₹399ಗೆ Paid Subscription ಆರಂಭ?