ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಈ ವಾರ ತೆರೆಗೆ 'ಅಟ್ಟಹಾಸ'

ನಟ ಕಿಶೋರ್, ಕುಖ್ಯಾತ ವೀರಪ್ಪನ್ ಪಾತ್ರದಲ್ಲಿ ಅಭಿನಯಿಸಿದ ಚಿತ್ರ...

Parashurama
Updated On : 14 Feb 2013, 6:00 am

ಎ.ಎಂ.ಆರ್ ರಮೇಶ್ ನಿರ್ದೇಶನದ 'ಅಟ್ಟಹಾಸ' ಚಿತ್ರ ಈ ವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಎ.ಎಂ.ಆರ್ ರಮೇಶ್ ಈ ಚಿತ್ರದ ನಿರ್ಮಾಪಕರೂ ಹೌದು.  ಕುಖ್ಯಾತ ವೀರಪ್ಪನ್ ಕುರಿತಾದ ಈ ಚಿತ್ರದಲ್ಲಿ ನಟ ಕಿಶೋರ್, ವೀರಪ್ಪನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಉಳಿದ ತಾರಾಗಣದಲ್ಲಿ ಅರ್ಜುನ್ ಸರ್ಜಾ, ಸುಚೇಂದ್ರ ಪ್ರಸಾದ್, ಭಾವನಾ ರಾವ್, ಲಕ್ಷ್ಮೀ ರೈ, ರವಿಕಾಳೆ, ಶ್ರವಂತ್, ವಿಜಯಲಕ್ಷ್ಮೀ ಮುಂತಾದವರಿದ್ದು, ಡಾ.ರಾಜ್‌ಕುಮಾರ್ ಪಾತ್ರದಲ್ಲಿ ಬಾಲಿವುಡ್ ನಟ ಸುರೇಶ್  ಒಬೆರಾಯ್ ಕಾಣಿಸಿಕೊಂಡಿರುವುದು ವಿಶೇಷ. ನಿರ್ದೇಶಕ ಎ.ಎಂ.ಆರ್. ರಮೇಶ್ ಕೂಡಾ ಚಿಕ್ಕ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಸಂದೀಪ್ ಚೌಟ ಸಂಗೀತ ನಿರ್ದೇಶನದ ಚಿತ್ರಕ್ಕೆ ವಿಜಯ್ ಛಾಯಾಗ್ರಹಣ ಮತ್ತು ರವಿವರ್ಮ, ಕೆ.ಡಿ ವೆಂಕಟೇಶ್, ದಿಲೀಪ್ ಅವರ ಸಾಹಸ ನಿರ್ದೇಶನವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments