ಸ್ಯಾಂಡಲ್‌ವುಡ್‌ನಲ್ಲಿ ಕಳೆದ ವಾರ ತೆರೆ ಕಂಡಿದ್ದ ಅಭಿಮನ್ಯು ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಕೊಳ್ಳೆ ಹೊಡೆಯುತ್ತಿದೆ. ಉತ್ತಮ ಸಾಮಾಜಿಕ ಕಥಾಹಂದರ ಹೊಂದಿರುವ 'ಅಭಿಮನ್ಯು' ಚಿತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿಯೇ ವಿಶೇಷವಾಗಿ ಪ್ರದರ್ಶನಗೊಳ್ಳಲಿದೆ.
ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾದ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅಭಿಮನ್ಯು ಚಿತ್ರಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ.
ಚಿತ್ರದ ಯಶಸ್ಸಿನ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಅರ್ಜುನ್ ಸರ್ಜಾ ಅವರು, ಪ್ರಧಾನಿ ಮೋದಿ ಅವರಿಗಾಗಿಯೇ ಚಿತ್ರದ ವಿಷೇಶ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.