ತಮನ್ನಾ ಭಾಟಿಯಾ 
ಸಿನಿಮಾ ಸುದ್ದಿ

ಪುನೀತ್ ಜತೆ ನಟಿಸಲ್ವಂತೆ ತಮನ್ನಾ

ಟಾಲಿವುಡ್ ಮತ್ತು ಕಾಲಿವುಡ್‌ನ ನಂ.1 ನಟಿ ತಮನ್ನಾ ಭಾಟಿಯಾ ಸ್ಯಾಂಡಲ್‌ವುಡ್‌ನ...

ಟಾಲಿವುಡ್ ಮತ್ತು ಕಾಲಿವುಡ್‌ನ ನಂ.1 ನಟಿ ತಮನ್ನಾ ಭಾಟಿಯಾ ಸ್ಯಾಂಡಲ್‌ವುಡ್‌ನ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲ್ವಂತೆ.

ಪುನೀತ್ ಅಭಿನಯದ ದುನಿಯಾ ಸೂರಿ ನಿರ್ದೇಶನದ 'ದೊಡ್ಮನೆ ಹುಡುಗ' ಚಿತ್ರದಲ್ಲಿ ನಟಿಸಲು ತಮನ್ನಾ ನಿರಾಕರಿಸಿದ್ದಾರಂತೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದ್ದು, ಸದ್ಯ ಚರ್ಚೆಗೆ ಗ್ರಾಸವಾಗಿದೆ.

'ದೊಡ್ಮನೆ ಹುಡುಗ' ಚಿತ್ರದಲ್ಲಿ ಪುನೀತ್‌ಗೆ ನಾಯಕಿ ನಟಿಯಾಗಲು ತಮನ್ನಾ ಕೇಳಲಾಗಿತ್ತು. ಆದರೆ, ಯಾಕೋ ಏನೋ ಆಕೆ ಸ್ಯಾಂಡಲ್‌ವುಡ್‌ನಲ್ಲಿ ನಟಿಸಲು ನಿರಾಕರಿಸಿದ್ದಾಳೆ.

ಪುನೀತ್ ಜತೆ ತಮನ್ನಾ ನಟಿಸುತ್ತಾಳೆ ಎಂಬ ವದಂತಿ ಹರಡಿದ ಬೆನ್ನಲ್ಲೇ, ಆಕೆ ಕನ್ನಡ ಚಿತ್ರದಲ್ಲಿ ನಟಿಸಲು ನಿರಾಕರಿಸಿರುವುದು ಕನ್ನಡ ಚಿತ್ರರಂಗದ ಬಗ್ಗೆ ಇರುವ ತಾತ್ಸಾರವನ್ನು ತೋರಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈಗಾಗಲೇ ಕನ್ನಡದ ಅನೇಕ ಚಿತ್ರಗಳಿಗೆ ನಾಯಕಿಯಾಗಿ ನಟಿಸಲು ತಮನ್ನಾಗೆ ಮಾಡಿದ ಆಫರ್ ಗಳನ್ನು ಅವರು ನಿರಾಕರಿಸುತ್ತಾ ಬಂದಿದ್ದಾರೆ.

ತಮನ್ನಾ ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಗಾಳಿ ಮಾತು ಕೇಳಿದ ತಮನ್ನಾ, ಸದ್ಯಕ್ಕೆ ನಾನು ತಮಿಳಿನ ಆರ್ಯ ಚಿತ್ರದಲ್ಲಿ ನಟಿಸುತ್ತಿದ್ದು, ಇತರೆ ಯಾವುದೇ ಭಾಷೆಗಳಲ್ಲಿ ನಟಿಸುತ್ತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!