ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ರೈತ ಕುಟುಂಬಗಳಿಗೆ ನಟ ಪುನೀತ್ ಸಾಂತ್ವನ

ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಮಂಡ್ಯ ಜಿಲ್ಲೆಯ ರೈತರ ಕುಟುಂಬಗಳಿಗೆ ಚಿತ್ರನಟ ಪುನೀತ್ ರಾಜ್‍ಕುಮಾರ್ ಬುಧವಾರ...

ಪಾಂಡವಪುರ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಮಂಡ್ಯ ಜಿಲ್ಲೆಯ ರೈತರ ಕುಟುಂಬಗಳಿಗೆ ಚಿತ್ರನಟ ಪುನೀತ್ ರಾಜ್‍ಕುಮಾರ್ ಬುಧವಾರ ಸಾಂತ್ವನ ಹೇಳಿದರು. ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯ ಪ್ರವಾಸಿ ಮಂದಿರದಲ್ಲಿ ರೈತ
ಕುಟುಂಬಗಳ ಸದಸ್ಯರನ್ನು ಭೇಟಿಯಾದ ನಟ ಪುನೀತ್ ಅವರು, ತಮ್ಮ ನಿರ್ಮಾಣ ಸಂಸ್ಥೆ ಪರವಾಗಿ ಪರಿಹಾರ ನೀಡಿ ಧೈರ್ಯ ತುಂಬಿದರು.

ಪಾಂಡವಪುರ ತಾಲೂಕಿನ ಗಾಣದಹೊಸೂರು ರೈತ ನಿಂಗೇಗೌಡ, ಶ್ರೀರಂಗಪಟ್ಟಣ ತಾಲೂಕಿನ ಚಿನ್ನೇನಹಳ್ಳಿ ರಾಜೇಂದ್ರ, ಸಬ್ಬನಕುಪ್ಪೆ ಕುಮಾರ್, ಮಂಡ್ಯ ತಾಲೂಕಿನ ಮಾಚನಹಳ್ಳಿ ಸಿದ್ದರಾಮು, ಮದ್ದೂರು ತಾಲೂಕಿನ ಕೊಣಸಾಲೆ ಗ್ರಾಮದ ರಮೇಶ್ ಅವರ ಕುಟುಂಬಸ್ಥರೊಂದಿಗೆ ಪುನೀತ್ ಕೆಲಕಾಲ ಮಾತುಕತೆ ನಡೆಸಿದರು. ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ರೈತರ ಹೋರಾಟಕ್ಕೆ ಚಿತ್ರರಂಗ ಬೆಂಬಲವಾಗಿ ನಿಲ್ಲಲು ಸಿದ್ಧವಿದೆ. ಹಾಗಾಗಿ ಧೈರ್ಯವಾಗಿ ಬದುಕು ನಡೆಸಬೇಕು ಎಂದು ಪುನೀತ್ ಆತ್ಮಸ್ಥೈರ್ಯ ತುಂಬಿದರು.

ಪಿಎಸ್‍ಎಸ್‍ಕೆ ಕಾರ್ಖಾನೆಯ ಒಳ ಆವರಣದಲ್ಲಿ ಕಳೆದ ಮೂರು ದಿನಗಳಿಂದ ನಟ ಪುನೀತ್ ರಾಜ್‍ಕುಮಾರ್ ನಾಯಕ ನಟರಾಗಿ ನಡೆಸಿರುವ ದೊಡ್ಮನೆ ಹುಡುಗ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಬುಧವಾರ ಚಿತ್ರೀಕರಣ ಮುಗಿದ ನಂತರ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಸ್ಥರನ್ನು ಕಾರ್ಖಾನೆ ಪ್ರವಾಸಿಮಂದಿರಕ್ಕೆ ಕರೆಸಿಕೊಂಡು ಪೂರ್ಣಿಮಾ ಎಂಟರ್ ಪ್ರೈಸಸ್ ವತಿಯಿಂದ ಪರಿಹಾರ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT