ಶಿವರಾಜ್ ಕುಮಾರ್ ಪುತ್ರಿ ವಿವಾಹಕ್ಕೆ ಅದ್ಧೂರಿ ಸಿದ್ಧತೆ 
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ ಪುತ್ರಿ ವಿವಾಹಕ್ಕೆ ಅದ್ಧೂರಿ ಸಿದ್ಧತೆ

ಜನಪ್ರಿಯ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ದಂಪತಿಯ ಪುತ್ರಿ ಡಾ.ನಿರುಪಮಾ ಅವರ ವಿವಾಹ ಮಹೋತ್ಸವಕ್ಕೆ ಭರ್ಜರಿ ತಯಾರಿ ನಡೆದಿದೆ...

ಜನಪ್ರಿಯ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ದಂಪತಿಯ ಪುತ್ರಿ ಡಾ.ನಿರುಪಮಾ ಅವರ ವಿವಾಹ ಮಹೋತ್ಸವಕ್ಕೆ ಭರ್ಜರಿ ತಯಾರಿ ನಡೆದಿದೆ. 
ಆಗಸ್ಟ್ 31ರಂದು ಸೋಮವಾರ ಬೆಳಗ್ಗೆ ಡಾ.ನಿರುಪಮಾ ಹಾಗೂ ಡಾ. ದಿಲೀಪ್ ಬಾಳ ಸಂಗಾತಿಗಳಾಗಿ ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದು, ಈ ಕ್ಷಣಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ವರನಟ ಡಾ.ರಾಜ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಕುಟುಂಬದಲ್ಲಿನ ಮೊಮ್ಮಕ್ಕಳ ಪೈಕಿ ಡಾ.ನಿರುಪಮಾ ಅವರ ವಿವಾಹ ಕಾರ್ಯವೇ ಮೊದಲು. ಹೀಗಾಗಿ ಉಭಯ ಕುಟುಂಬದವರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ. 
ವಧು-ವರರ ಪೋಷಕರು, ಬಂಧುಗಳು, ಸ್ನೇಹಿತರು ಸೇರಿದಂತೆ ಅಪಾರ ಸಂಖ್ಯೆಯ ಶಿವಣ್ಣ ಅವರ ಅಭಿಮಾನಿಗಳು, ಹಿತೈಷಿಗಳು ಈ ಮದುವೆ ಕಾರ್ಯಕ್ರಮಕ್ಕೆ ಬರುವ ನಿರೀಕ್ಷೆಯಿದ್ದು, ಊಟೋಪಚಾರಕ್ಕೆ ಯಾವುದೇ ತೊಂದರೆಯಾಗದಂತೆ, ತ್ರಿಪುರವಾಸಿನಿಯಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ತ್ರಿಪುರ ವಾಸಿನಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಹೆಬ್ಬಾಗಿಲುಗಳಲ್ಲಿ ವರನಟ ರಾಜ್ ಕುಮಾರ್ ಮತ್ತು ಎಸ್. ಬಂಗಾರಪ್ಪ ದಂಪತಿಯ ಬೃಹತ್ ಭಾವಚಿತ್ರಗಳನ್ನು ಹಾಕಲಾಗಿದೆ. 
ತಾರಾ ಸಮಾಗಮ: ಬಾಲಿವುಡ್ ನಟ ಬಿಗ್ ಬಿ ಅಮಿತಾಭ್ ಬಚ್ಚನ್ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ದಿಗ್ಗಜರಾದ ಸೂಪರ್ ಸ್ಟಾರ್ ರಜನಿಕಾಂತ್, ಚಿರಂಜೀವಿ, ಮೋಹನ್ ಲಾಲ್ ಸೇರಿದಂತೆ ಟಾಲಿವುಡ್ ಮತ್ತು ಕಾಲಿವುಡ್ ದಿಗ್ಗಜರೂ ಆಗಮಿಸುವ ಸಾಧ್ಯತೆಯಿದೆ. ಇನ್ನು ದೊಡ್ಮನೆ ಮದುವೆ ಕಾರ್ಯದಲ್ಲಿ ಹಿರಿಯ ನಟ ಅಂಬರೀಷ್ ಸೇರಿದಂತೆ ಸ್ಯಾಂಡಲ್‍ವುಡ್ ತಾರೆಯರೂ ಜಮಾಯಿಸಲಿದ್ದಾರೆ. ರಾಜಕೀಯ ಕ್ಷೇತ್ರದ ಗಣ್ಯಾತಿಗಣ್ಯರೂ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಗೂ ವ್ಯವಸ್ಥೆ ಮಾಡಲಾಗಿದೆ. 
ಶುಕ್ರವಾರದಿಂದಲೇ ಶಾಸ್ತ್ರಗಳು ನಡೆದಿವೆ. ಅರಿಶಿಣ ಶಾಸ್ತ್ರದ ನಂತರ ಶನಿವಾರ ಮೆಹಂದಿ ಶಾಸ್ತ್ರ ನಡೆಯಿತು. ನಿರುಪಮಾ ಅವರ ಸೋದರ ಮಾವ, ಶಾಸಕ ಮಧು ಬಂಗಾರಪ್ಪ ಅವರೊಂದಿಗೆ ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ರಾಕ್ ಲೈನ್ ವೆಂಕಟೇಶ್ ಮಹೋತ್ಸವದ ಉಸ್ತುವಾರಿ ವಹಿಸಿದ್ದಾರೆ. ಬಿಗಿ ಬಂದೋಬಸ್ತ್ ಟಾಲಿವುಡ್, ಕಾಲಿವುಡ್, ಸ್ಯಾಂಡಲ್‍ವುಡ್ ತಾರೆಯರೂ ಜಮಾಯಿಸಲಿದ್ದಾರೆ. ರಾಜಕೀಯ ಕ್ಷೇತ್ರದ ಗಣ್ಯಾತಿಗಣ್ಯರೂ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್‍ಗೂ ವ್ಯವಸ್ಥೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ