ಸಿನಿಮಾ ಸುದ್ದಿ

ಜೋಗಿ ಪ್ರೇಮ್ ಚಿತ್ರದಲ್ಲಿ ಒಟ್ಟಿಗೆ ನಟಿಸಲಿದ್ದಾರೆ ಶಿವಣ್ಣ-ಸುದೀಪ್ !

Shilpa D

ನಿರ್ದೇಶಕ ಹಾಗೂ ನಟ ಜೋಗಿ ಪ್ರೇಮ್ ಅವರ ಮುಂದಿನ ನಿರ್ದೇಶನದಲ್ಲಿ ಬರುವ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಒಟ್ಟಿಗೆ ಅಭಿನಯಿಸಲಿದ್ದಾರೆ.

ಶಿವರಾಜ್ ಕುಮಾರ್ ಮತ್ತು ಸುದೀಪ್ ಅಭಿನಯಿಸಲಿರುವ ಈ ಚಿತ್ರಕ್ಕೆ ಇನ್ನೂ ಟೈಟಲ್ ಅಂತಿಮವಾಗಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವಾರ ಚಿತ್ರದ ಟೈಟಲ್ ಅನ್ನು ಬಿಡುಗಡೆ ಮಾಡಲಿದ್ದಾರೆ.

ಇದುವರೆಗೂ ಚಿತ್ರದ ಟೈಟಲ್ ಯಾವುದು ಎಂಬುದನ್ನು ಎಲ್ಲಿಯೂ ಲೀಕ್ ಆಗದಂತೆ ನೋಡಿಕೊಂಡಿರುವ ನಿರ್ದೇಶಕ ಪ್ರೇಮ್, ಟೈಟಲ್ ಬಿಡುಗಡೆಗಾಗಿ ಬಹುದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಿದ್ದಾರಂತೆ.

ಇನ್ನು ಸಿ.ಆರ್ ಮನೋಹರ್  ಚಿತ್ರವನ್ನು ನಿರ್ಮಿಸುತ್ತಿದ್ದು, 100 ಕೋಟಿ ಬಜೆಟ್ ನ ಚಿತ್ರ ಇದಾಗಿದೆ ಎಂದು ಪ್ರೇಮ್ ಹೇಳಿದ್ದಾರೆ, ಸುದೀಪ್ ಹಾಗೂ ಶಿವರಾಜ್ ಕುಮಾರ್ ಅಭಿಮಾನಿಗಳಿಗಾಗಿ ಚಿತ್ರ ಮಾಡುತ್ತಿದ್ದು, ಒಂದು ವರ್ಷದಲ್ಲಿ ಚಿತ್ರೀಕರಣ ಪೂರ್ಣಗೊಳಿಸುವುದಾಗಿ ಪ್ರೇಮ್ ಹೇಳಿದ್ದಾರೆ.

SCROLL FOR NEXT