ಸೂಪರ್ ಸ್ಟಾರ್ ರಜನಿಕಾಂತ್ 
ಸಿನಿಮಾ ಸುದ್ದಿ

ಹುಟ್ಟುಹಬ್ಬದ ಸಂಭ್ರಮ ಬೇಡೆಂದ ರಜನಿಕಾಂತ್

ಶನಿವಾರಕ್ಕೆ ೬೪ ತುಂಬುವ ಸೂಪರ್ ಸ್ಟಾರ್ ರಜನಿಕಾಂತ್, ತಮ್ಮ ಹುಟ್ಟುಹಬ್ಬವನ್ನು ವೈಭವಪೂರಿತವಾಗಿ ಆಚರಿಸದಿರುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ತಮಿಳುನಾಡಿನಾದ್ಯಂತ

ಚೆನ್ನೈ: ಶನಿವಾರಕ್ಕೆ ೬೪ ತುಂಬುವ ಸೂಪರ್ ಸ್ಟಾರ್ ರಜನಿಕಾಂತ್, ತಮ್ಮ ಹುಟ್ಟುಹಬ್ಬವನ್ನು ವೈಭವಪೂರಿತವಾಗಿ ಆಚರಿಸದಿರುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿದು, ಪ್ರವಾಹ ಸ್ಥಿತಿ ನಿರ್ಮಾಣವಾಗಿ ಹಲವರಿಗೆ ತೊಂದರೆಯಾಗಿರುವ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

"ಶತಮಾನದ ಭಾರಿ ಮಳೆಯಿಂದಾಗಿ ತಮಿಳು ನಾಡು ಈಗಷ್ಟೇ ಸಹಜ ಸ್ಥಿತಿಗೆ ಮರಳುತ್ತಿರುವ ಈ ಸಂದರ್ಭದಲ್ಲಿ ರಜನಿಕಾಂತ್ ಅವರು ಪರಿಹಾರ ಕಾರ್ಯಕ್ಕೆ ಕೈಜೋಡಿಸುವಂತೆ ತಮ್ಮ ಅಭಿಮಾನಿಗಳಲ್ಲಿ ಮೊರೆ ಇಟ್ಟಿದ್ದಾರೆ" ಎಂದು ನಟನ ಹತ್ತಿರದ ಮೂಲಗಳು ತಿಳಿಸಿವೆ.

ಮೂಲದ ಪ್ರಕಾರ ತನ್ನ ಹುಟ್ಟುಹಬ್ಬದ ಆಚರಣೆಗಿಂತಲೂ ಜನರಿಗೆ ಸಹಾಯ ಮಾಡುವುದು ದೊಡ್ಡತನ ಎಂದು ಹಿರಿಯ ನಟ ತಿಳಿದಿದ್ದಾರೆ ಎನ್ನಲಾಗಿದೆ.

ಇದೇ ಹಿನ್ನಲೆಯಲ್ಲಿ ಹುಟ್ಟುಹಬ್ಬದ ದಿನದಂದು ನೆರವೇರಬೇಕಿದ್ದ 'ಎಂದಿರನ್-೨' ಸಿನೆಮಾದ ಅಧಿಕೃತ ಘೋಷಣೆ ಕೂಡ ಅನಿರ್ಧಿಷ್ಟ ಕಾಲದವರೆಗೆ ಮುಂದೂಡಲಾಗಿದೆ.

ಸದ್ಯಕ್ಕೆ ತಮಿಳು ಸಿನೆಮಾ 'ಕಬಾಲಿ'ಯಲ್ಲಿ ರಜನಿಕಾಂತ್ ನಿರತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!