ಇತ್ತೀಚಿನ ದಿನಗಳಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ನಡುವಿನ ಕೇಸರೆರೆಚಾಟ ಚಾಸ್ತಿಯಾಗಿದೆ. ಅದರಂತೆ ಗೆದ್ದ ನಟರ ಅಭಿಮಾನಿಗಳು ಸೋತ ನಟರ ವಿರುದ್ಧ ಮಾತನಾಡುವುದು ಹೆಚ್ಚಾಗಿದೆ.
ಇಂತ ಬೆಳವಣಿಗೆಯನ್ನು ತಡೆಯುವ ಸಲುವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಿಗೆ ಫೇಸ್ಬುಕ್, ಟ್ವಿಟ್ಟರ್ ಗಳಲ್ಲಿ ಬೇರೆ ಸಹನಟರನ್ನು ನಿಂದಿಸಿ ಮಾತನಾಡುವುದು ಸರಿಯಲ್ಲ. ಇದು ಉತ್ತಮ ಬೆಳವಣಿಗೆಯಲ್ಲ ಹೀಗಾಗಿ ನಿಂದನೆ ಬೇಡ ಎಂದು ತಮ್ಮ ಪ್ರೀತಿಯ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.
ನನ್ನ ನಿಜವಾದ ಅಭಿಮಾನಗಳಾಗಿದ್ದಲ್ಲಿ ಅದನ್ನು ನಿಲ್ಲಿಸಬೇಕು. ಯಾರಾದರೂ ಅಂತ ಕೆಲಸಗಳಲ್ಲಿ ಭಾಗವಹಿಸಿದರೆ ನನಗೆ ನೋವಾಗುವುದಂತು ನಿಜ. ಬೇರೆಯವರು ಮಾಡ್ತಾರೆ ಅಂತ, ನಾವು ಅವರ ವಿರುದ್ಧ ಅದೇ ರೀತಿ ವರ್ತಿಸಿದರೆ ನಮಗೂ ಬೇರೆಯವರಿಗೂ ಯಾವುದೇ ವ್ಯತ್ಯಾಸ ಇರುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.
ಎಲ್ಲರನ್ನೂ ಪ್ರೀತಿಸಿ, ಕನ್ನಡ ಚಿತ್ರಗಳನ್ನು ಪ್ರೋತ್ಸಾಹಿಸಿ. ನಿಮ್ಮ ದಾಸ ದರ್ಶನ್