ಸ್ಯಾಂಡಲ್‌ವುಡ್ ಯಶಸ್ವಿ ಜೋಡಿ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಮತ್ತೆ ಒಂದಾಗಿದ್ದಾರೆ. 'ಮುಂಗಾರು ಮಳೆ' ಹಾಗೂ ಗಾಳಿಪಟದಂತಹ ಯಶಸ್ವಿ ಚಿತ್ರಗಳನ್ನು ನೀಡಿದ್ದ ಈ ಜೋಡಿಯ ಮತ್ತೊಂದು ಚಿತ್ರ ಏಪ್ರಿಲ್‌ನಲ್ಲಿ ಸೆಟ್ಟೇರುತ್ತಿದೆ.
ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಚಿತ್ರಗಳನ್ನು ನೀಡುತ್ತಾ ಬರುತ್ತಿರುವ ಮೀಡಿಯಾ ಹೌಸ್ ಲಾಂಛನದಲ್ಲಿ ಬಿ.ಸುರೇಶ್ ಹಾಗೂ ಶೈಲಜಾನಾಗ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಇನ್ನು ಹೆಸರಿಡದ ಈ ಚಿತ್ರಕ್ಕೆ ವಿ.ಹರಿಕೃಷ್ಣ ಅವರು ಸಂಗೀತ ನೀಡಲಿದ್ದಾರೆ. ಉಳಿದ ತಾರಾಬಳಗ ಹಾಗೂ ತಂತ್ರಜ್ಞರ ಆಯ್ಕೆ ನಡೆಯುತ್ತಿದೆ.