ಚುಂಬನ ದೃಶ್ಯಗಳಲ್ಲಿ ನಟಿಸಲ್ಲ: ಹನ್ಸಿಕಾ ಮೋಟ್ವಾನಿ
ಇತ್ತೀಚೆಗೆ ಭಾರತೀಯ ಚಿತ್ರರಂಗದಲ್ಲೂ ಚುಂಬಕ ದೃಶ್ಯಗಳು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ.
ಮುಂಬೈ: ಇತ್ತೀಚೆಗೆ ಭಾರತೀಯ ಚಿತ್ರರಂಗದಲ್ಲೂ ಚುಂಬಕ ದೃಶ್ಯಗಳು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಇನ್ನು ಮುಂದೆ ನಾನು ಲಿಪ್‌ಲಾಕ್(ಚುಂಬಕ) ದೃಶ್ಯಗಳಲ್ಲಿ ನಟಿಸುವುದಿಲ್ಲ ಎಂದು ಹನ್ಸಿಕಾ ಮೋಟ್ವಾನಿ ಹೊಸ ಬಾಂಬ್ ಸಿಡಿಸಿದ್ದಾರೆ.
ತುಟಿಗೆ ತುಟಿ ಬೆರೆಸುವುದರಿಂದ ಅನಾರೋಗ್ಯಕ್ಕೆ ತುತ್ತಾಗಬೇಕಾಗುತ್ತದೆ. ಲಿಪ್‌ಲಾಕ್ ಮಾಡುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹಾನಿಕಾರಕ ಬ್ಯಾಕ್ಟೀರಿಯಾಗಳು ಹರಡುತ್ತವೆ ಹೀಗಾಗಿ ನಾನು ಚುಂಬಕ ದೃಶ್ಯಗಳಲ್ಲಿ ನಟಿಸುವುದಿಲ್ಲ ಎಂದು ಹೇಳಿದ್ದಾಳೆ.
ಇಲ್ಲಿಯವರೆಗೂ ಯಾವುದೇ ಲಿಪ್‌ಲಾಕ್ ದೃಶ್ಯಗಳಲ್ಲಿ ಅಭಿನಯಿಸಿಲ್ಲ. ಇನ್ನು ಮುಂದೆಯೂ ಅಭಿನಯಿಸುವುದಿಲ್ಲ. ಅದೇ ರೀತಿ ಹಸಿಬಿಸಿ ದೃಶ್ಯಗಳಲ್ಲಿ ನಟಿಸಲು ನಾನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ತಣ್ಣೀರು ಎರೆಚಿದ್ದಾಳೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.