ಬೆಂಗಳೂರು: ಸ್ಯಾಂಡಲ್ ವುಡ್ ನಟ ಯೋಗೇಶ್ ಅವರು ಉಸಿರಾಟದ ಸಮಸ್ಯೆಯಿಂದ ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯೋಗೇಶ್, ಕಫದ ಸಮಸ್ಯೆಯಿಂದ ಉಸಿರಾಟಕ್ಕೆ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಸಮಸ್ಯೆ ಬೇಗ ಗುಣಮುಖವಾದರೆ ನಾಳೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವುದಾಗಿ ಹೇಳಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಲೂಸ್ ಮಾದ ಎಂದೇ ಖ್ಯಾತಿ ಗಳಿಸಿರುವ ಯೋಗೇಶ್ ಅಪಾರವಾದ ಅಭಿಮಾನಿಗಳನ್ನು ಹೊಂದಿದ್ದಾರೆ. ಯೋಗಿ ಆಸ್ಪತ್ರೆಗೆ ಸೇರಿರುವ ಸುದ್ದಿ ಕೇಳಿ ಅಭಿಮಾನಿಗಳ ಆತಂಕಕ್ಕೀಡಾಗಿದ್ದರು. ಇದೀಗ ಯೋಗಿ ಅವರ ಮಾತು ಅಭಿಮಾನಿಗಳಲ್ಲಿ ಸಮಾಧಾನ ತಂದಿದೆ.