ಬೆಂಗಳೂರು: ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರು 53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ನಟ ಯಶ್ ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಸಿದರು.
ಬೆಳಗ್ಗೆಯೆ ಶಿವಣ್ಣನ ಮನೆಗೆ ಭೇಟಿ ನೀಡಿದ ಯಶ್ ಶುಭಾಶಯ ತಿಳಿಸಿದರು. ಇನ್ನು ಬೆಳಗಿನಿಂದಲೇ ತಮ್ಮ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳ ಜೊತೆ ಕೇಕ್ ಕತ್ತರಿಸುವ ಮೂಲಕ ಶಿವಣ್ಣ ಹುಟ್ಟುಹಬ್ಬ ಆಚರಿಸಿಕೊಂಡರು.