ವಿಷ್ಣು ಸಮಾಧಿ 
ಸಿನಿಮಾ ಸುದ್ದಿ

ವಿಷ್ಣು ಸಮಾಧಿ ವಿವಾದ ಅಂತ್ಯ, ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕ ನಿರ್ಮಾಣ

ಕನ್ನಡದ ಮೇರು ನಟ ಡಾ.ವಿಷ್ಟುವರ್ಧನ್ ಅವರ ಸಮಾಧಿ ವಿವಾದ ಕೊನೆಗೂ ಬಗೆಹರಿದಿದ್ದು, ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲೇ....

ಬೆಂಗಳೂರು: ಕನ್ನಡದ ಮೇರು ನಟ ಡಾ.ವಿಷ್ಟುವರ್ಧನ್ ಅವರ ಸಮಾಧಿ ವಿವಾದ ಕೊನೆಗೂ ಬಗೆಹರಿದಿದ್ದು, ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲೇ ಸಾಹಸ ಸಿಂಹನ ಸ್ಮಾರಕ ನಿರ್ಮಾಣವಾಗಲಿದೆ.

ವಿಷ್ಣು ಸ್ಮಾರಕಕ್ಕಾಗಿ 2 ಎಕರೆ ಜಮೀನು ನೀಡಲು ಅಭಿಮಾನ್ ಸ್ಟುಡಿಯೋ ಮಾಲೀಕರು ಸಮ್ಮತಿ ಸೂಚಿಸಿದ್ದು, ಈ ಸಂಬಂಧ ಅವರು ಇಂದು ಜಿಲ್ಲಾಧಿಕಾರಿಗೆ ಲಿಖಿತ ಸಮ್ಮತಿ ಪತ್ರ ನೀಡಿದ್ದಾರೆ.

ಭಾರತಿ ವಿಷ್ಣುವರ್ಧನ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಂಕರ್ ಸಮ್ಮುಖದಲ್ಲಿ ಅಭಿಮಾನ್ ಸ್ಟುಡಿಯೋ ಮಾಲೀಕರು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದರು.

ವಿಷ್ಣುವರ್ಧನ್ ಅವರ ಸ್ಮರಣಾರ್ಥ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ನಗರದ ಉತ್ತರಹಳ್ಳಿ ಬಳಿಯ ಅಭಿಮಾನ್ ಸ್ಟುಡಿಯೋದಲ್ಲಿ ಎರಡು ಎಕರೆ ಜಮೀನು ಮಂಜೂರು ಮಾಡಿತ್ತು. ಆದರೆ ಸ್ಟುಡಿಯೋ ಮಾಲೀಕರು ತಕರಾರು ತೆಗೆದ ಹಿನ್ನೆಲೆಯಲ್ಲಿ ಸರ್ಕಾರ ಮೈಲಸಂದ್ರದ ಬಳಿ ಎರಡು ಎಕರೆ ಭೂಮಿ ಮಂಜೂರು ಮಾಡಿತ್ತು. ಈ  ಜಮೀನು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಬಫರ್ ವಲಯದ ವ್ಯಾಪ್ತಿಗೆ ಸೇರುತ್ತದೆ ಎಂದು ಹೈಕೋರ್ಟ್ ಇದನ್ನೂ ಸಹ ರದ್ದುಗೊಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT