ಖ್ಯಾತ ನಟ, ವಸತಿ ಸಚಿವ ಅಂಬರೀಶ್ 
ಸಿನಿಮಾ ಸುದ್ದಿ

ಅಂಬಿ ಆಸ್ಪತ್ರೆಗೆ ದಾಖಲು

ಖ್ಯಾತ ನಟ, ವಸತಿ ಸಚಿವ ಅಂಬರೀಶ್ ಇಂದು ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಿಲ್ಲ...

ಬೆಂಗಳೂರು: ಖ್ಯಾತ ನಟ, ವಸತಿ ಸಚಿವ ಅಂಬರೀಶ್ ಇಂದು ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಆದರೆ ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶೀಘ್ರದಲ್ಲೇ ಅವರು ಮನೆಗೆ ತೆರಳಲಿದ್ದಾರೆ ಎಂದು ಕೂಡ ಮೂಲಗಳು ತಿಳಿಸಿವೆ.

ಇತ್ತೀಚೆಗೆ ವಾಣಿಜ್ಯ ಮಂಡಳಿಯಲ್ಲಿ ನಿರ್ಮಾಪಕರ ಧರಣಿಯನ್ನು ಅಂಬರೀಶ್ ಅವರು ಬಗೆಹರಿಸಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ 'ಭಿಕ್ಷುಕರಿಗೆ ಆಯ್ಕೆಯಿಲ್ಲ' ಎಂದು ವರದಿಗಾರರಿಗೆ ನೀಡಿದ್ದ ಹೇಳಿಕೆ ಭಾರಿ ವಿವಾದವನ್ನು ಸೃಷ್ಟಿಸಿ, ಹೇಳಿಕೆಯನ್ನು ಹಿಂಪಡೆದು ಕ್ಷಮೆ ಯಾಚಿಸಬೇಕು ಎಂದು ನಿರ್ಮಾಪಕರು ನಿನ್ನೆ ಪಟ್ಟು ಹಿಡಿದಿದ್ದರು.

ಕಳೆದ ವರ್ಷದ ಫೆಬ್ರವರಿಯಲ್ಲಿ ಅಂಬರೀಶ್ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಅವರ ಅಪಾರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಆದರೆ ಸಚಿವರು ಸಂಪೂರ್ಣ ಗುಣಮುಖರಾಗಿ  ಹೊರಬಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!