ಅಜಯ್ ರಾವ್ 
ಸಿನಿಮಾ ಸುದ್ದಿ

ಅನಿಲ್ ಕುಮಾರ್ ನಿರ್ದೇಶನದಲ್ಲಿ ಅಜಯ್ ರಾವ್ ಮುಂದಿನ ಚಿತ್ರ

ಕೃಷ್ಣಾ ಲೀಲಾ ಚಿತ್ರದ ಯಶಸ್ಸಿನಲ್ಲಿರುವ ಅಜಯ್ ರಾವ್, ಮತ್ತೊಂದು ಸಿನಿಮಾದಲ್ಲಿ ನಟಿಸಲು ಸಿದ್ಧತೆ ನಡೆಸಿದ್ದಾರೆ.

ಬೆಂಗಳೂರು: ಕೃಷ್ಣಾ ಲೀಲಾ ಚಿತ್ರದ ಯಶಸ್ಸಿನಲ್ಲಿರುವ ಅಜಯ್ ರಾವ್, ಮತ್ತೊಂದು ಸಿನಿಮಾದಲ್ಲಿ ನಟಿಸಲು ಸಿದ್ಧತೆ ನಡೆಸಿದ್ದಾರೆ.

ನಿರ್ಮಾಪಕ ಉದಯ್ ಮೆಹ್ತಾ ಹಾಗೂ ನಿರ್ದೇಶಕ ಅನಿಲ್ ಕುಮಾರ್ ಅವರೊಂದಿಗೆ ಅಜಯ್ ರಾವ್ ಅವರ ಮುಂದಿನ ಸಿನಿಮಾ ಸಿದ್ಧವಾಗುತ್ತಿದೆ. ಈ ಬಗ್ಗೆ ಮಾಹಿತಿಯನ್ನು ಖಚಿತಪಡಿಸಿರುವ ನಿರ್ಮಾಪಕ ಉದಯ್ ಮೆಹ್ತಾ, 5 ವರ್ಷಗಳ ನಂತರ ಅಜಯ್ ರಾವ್ ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತಸದ ವಿಷಯ ಎಂದು ಹೇಳಿದ್ದಾರೆ.

ಅಜಯ್ ರಾವ್ ಅವರಿಗೆ ಸ್ಯಾಂಡಲ್ ವುಡ್ ನಲ್ಲಿ ಉತ್ತಮ ಹೆಸರು ತಂದು ಕೊಟ್ಟ  ಕೃಷ್ಣನ್ ಲವ್ ಸ್ಟೋರಿ ಸಿನಿಮಾವನ್ನು ನಿರ್ಮಾಣ ಮಾಡಿದ್ದೆ. ಇದಾದ 5 ವರ್ಷಗಳ ಬಳಿಕ ಮತ್ತೊಮ್ಮೆ ಅಜಯ್ ರಾವ್ ಅವರ ಸಿನಿಮಾ ನಿರ್ಮಾಣ ಮಾಡುತ್ತಿರುವುದಾಗಿ ಉದಯ್ ಮೆಹ್ತಾ ತಿಳಸಿದ್ದಾರೆ. ಇತ್ತೀಚೆಗಷ್ಟೆ ಬಿಡುಗಡೆಯಾಗಿ ಯಶಸ್ವಿಯಾಗಿರುವ ಕೃಷ್ಣ ಲೀಲಾ ಸಿನಿಮಾವನ್ನು ನಾನೇ ನಿರ್ಮಾಣ ಮಾಡಬೇಕಿತ್ತು, ಆದರೆ ಬೇರೊಂದು ಯೋಜನೆಯಲ್ಲಿದ್ದಿದ್ದರಿಂದ ಅಜಯ್ ತಾವೇ ನಿರ್ಮಾಣ ಮಾಡಿದರು ಎಂದು ಉದಯ್ ಮೆಹ್ತಾ ತಿಳಿಸಿದ್ದಾರೆ.

ದಿಲ್ ವಾಲ ಚಿತ್ರದ ಮೂಲಕ ನಿರ್ದೇಶನ ಪ್ರಾರಂಭಿಸಿದ್ದ ಅನಿಲ್, ಅಜಯ್ ರಾವ್ ಅವರ ಮುಂದಿನ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಇಬ್ಬರ  ಪ್ರತಿಭೆ ಹೊಂದಣಿಕೆಯಾಗಲಿದೆ ಎಂದು ನಿರ್ಮಾಪಕರು ಅಭಿಪ್ರಾಯಪಟ್ಟಿದ್ದಾರೆ. ಚಿತ್ರಕಥೆ ಸಿದ್ಧವಾಗುತ್ತಿದ್ದು ಎಲ್ಲಾ ವರ್ಗದ ಪ್ರೇಕ್ಷಕರು ನೋಡಬಹುದಾದ ಸಿನಿಮಾ ಅಗಿರಲಿದೆ.  ಆಗಸ್ಟ್ 15 ರಂದು ಚಿತ್ರೀಕರಣ ಪ್ರಾರಂಭಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT