ಉತ್ತಮ ವಿಲನ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಉತ್ತಮ ವಿಲನ್' ವಿವಾದ ಅಂತ್ಯ, ಇಂದು ದೇಶಾದ್ಯಂತ ಬಿಡುಗಡೆ

ನಿರ್ಮಾಪಕರು ಹಾಗೂ ವಿತರಕರ ನಡುವಿನ ವಿವಾದ ಅಂತ್ಯವಾಗಿದ್ದು, ನಟ ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಉತ್ತಮ ವಿಲನ್'....

ಚೆನ್ನೈ: ನಿರ್ಮಾಪಕರು ಹಾಗೂ ಫೈನಾನ್ಶಿಯರ್ ನಡುವಿನ ವಿವಾದ ಅಂತ್ಯವಾಗಿದ್ದು, ನಟ ಕಮಲ್ ಹಾಸನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಉತ್ತಮ ವಿಲನ್' ಇಂದು ದೇಶಾದ್ಯಂತ ತೆರೆ ಕಾಣುತ್ತಿದೆ.

ಪ್ರತಿಭಾನ್ವಿತ ನಟ ಮತ್ತು ನಿರ್ದೇಶಕ ರಮೇಶ್ ಅರವಿಂದ್ ನಿರ್ದೇಶನದ ಉತ್ತಮ ವಿಲನ್ ಚಿತ್ರ ನಿನ್ನೆ ದೇಶಾದ್ಯಂತ ತೆರೆಕಾಣಬೇಕಿತ್ತು. ಆದರೆ ಚಿತ್ರ ನಿರ್ಮಾಪಕರು ಮತ್ತು ಫೈನಾನ್ಶಿಯರ್ ನಡುವಿನ ಆರ್ಥಿಕ ಸಮಸ್ಯೆಯಿಂದಾಗಿ ಮೊದಲ ದಿನದ ಶೋ ರದ್ದುಗೊಂಡಿತ್ತು.

ನಿರ್ಮಾಪಕರು ಮತ್ತು ಫೈನಾನ್ಶಿಯರ್ ನಡುವೆ ಭುಗಿಲೆದ್ದಿದ್ದ ವಿವಾದ ಇಂದು ಅಂತ್ಯವಾಗಿದ್ದು, ಚೆನ್ನೈನಲ್ಲಿ ಮಧ್ಯಾಹ್ನ 12 ಗಂಟೆಗೆ ಮೊದಲ ಶೋ ಪ್ರದರ್ಶನಗೊಳ್ಳಲಿದೆ. ಮಧ್ಯಾಹ್ನದ ನಂತರ ಕರ್ನಾಟಕ ಸೇರಿದಂತೆ ದೇಶ, ವಿದೇಶಗಳಲ್ಲಿ ಚಿತ್ರ ತೆರೆ ಕಾಣಲಿದೆ.

ಉತ್ತಮ ವಿಲನ್ ಚಿತ್ರ ವೀಕ್ಷಣೆಗಾಗಿ  ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸಾವಿರಾರು ಅಭಿಮಾನಿಗಳು ಟಿಕೆಟ್ ಬುಕ್ ಮಾಡಿದ್ದರು. ಆದರೆ ಚಿತ್ರ ಪ್ರದರ್ಶನ ರದ್ದುಗೊಂಡಿದ್ದರಿಂದ ಚಿತ್ರಮಂದಿರದ ಬಳಿ ನೆರೆದಿರುವ ಸಾವಿರಾರು ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ