ಸಲ್ಮಾನ್ ಖಾನ್ 
ಸಿನಿಮಾ ಸುದ್ದಿ

ಸಲ್ಮಾನ್‍ಗೆ ಜಾಮೀನು: ಬಜರಂಗಿ ಭಾಯಿಜಾನ್ ಶೂಟಿಂಗ್‌ಗಾಗಿ ಇಂದು ಕಾಶ್ಮೀರಕ್ಕೆ!

2002ರ ಗುದ್ದೋಡು ಪ್ರಕರಣ ಸಂಬಂಧ ಜಾಮೀನು ಸಿಗುತ್ತಿದ್ದಂತೆ ಬಜರಂಗಿ ಭಾಯಿಜಾನ್ ಚಿತ್ರದ ಚಿತ್ರೀಕರಣಕ್ಕಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್‍...

ಮುಂಬೈ: 2002ರ ಗುದ್ದೋಡು ಪ್ರಕರಣ ಸಂಬಂಧ ಜಾಮೀನು ಸಿಗುತ್ತಿದ್ದಂತೆ ಬಜರಂಗಿ ಭಾಯಿಜಾನ್ ಚಿತ್ರದ ಚಿತ್ರೀಕರಣಕ್ಕಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್‍ಗೆ ಕಾಶ್ಮೀರಕ್ಕೆ ತೆರಳಲಿದ್ದಾರೆ ಎಂದು ವರದಿಗಳು ತಿಳಿಸಿದೆ.

13 ವರ್ಷಗಳ ಹಿಂದಿನ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ 5 ವರ್ಷಗಳ ಜೈಲುಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಅಮಾನತುಗೊಳಿಸಿ ಕಾಯಂ ಜಾಮೀನು ನೀಡಿದ ಬೆನ್ನಲ್ಲೇ ಸಲ್ಮಾನ್ ಇಂದು ಬಜರಂಗಿ ಭಾಯಿಜಾನ್ ಚಿತ್ರೀಕರಣಕ್ಕಾಗಿ ಸಲ್ಮಾನ್ ಮತ್ತು ತಂಡ ಕಾಶ್ಮೀರಕ್ಕೆ ತೆರಳಲಿದೆ ಎಂದು ಮೂಲಗಳು ಹೇಳಿವೆ.

ಜಾಮೀನಿಗಾಗಿ 30 ಸಾವಿರ ಶ್ಯೂರಿಟಿ ನೀಡಿ, ಪಾಸ್ ಫೋರ್ಟ್ ಅನ್ನು ನ್ಯಾಯಾಲಯಕ್ಕೆ ಕೊಟ್ಟು ಜಾಮೀನು ಪಡೆಯುವಂತೆ ಹೈಕೋರ್ಟ್ ಸೂಚಿಸಿತ್ತು. ಕೆಲಸ ನಿಮಿತ್ತ ವಿದೇಶಕ್ಕೆ ತೆರಳಬೇಕಿದ್ದರೆ, ಕೋರ್ಟ್ ಅನುಮತಿ ಪಡೆದು ಪ್ರಯಾಣಿಸಬೇಕು ಎಂದು ಸೂಚಿಸಿತ್ತು.

ಹೈಕೋರ್ಟ್ ನಿಂದ ಜಾಮೀನು ಸಿಗುತ್ತಿದ್ದಂತೆ ಶುಕ್ರವಾರ ಸಂಜೆ ಸೆಷನ್ಸ್ ಕೋರ್ಟ್ ಗೆ ಶರಣಾದ ಸಲ್ಮಾನ್ ಖಾನ್ 30 ಸಾವಿರ ರು. ಶ್ಯೂರಿಟಿ ನೀಡಿ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿಗೊಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT