ಸ್ವಾತಿ - ನಿಖಿಲ್ ಗೌಡ 
ಸಿನಿಮಾ ಸುದ್ದಿ

ಕೆಸಿಎನ್ ಪುತ್ರಿ ಸ್ವಾತಿಯ ಕೈಹಿಡಿಯಲಿದ್ದಾರೆ ಎಚ್‌ಡಿಕೆ ಪುತ್ರ ನಿಖಿಲ್‌ಗೌಡ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಗೌಡ ಅವರು ನಿರ್ಮಾಪಕ ಕೆಸಿಎನ್ ಮೋಹನ್ ಹಾಗೂ ನಿರ್ದೇಶಕಿ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಗೌಡ ಅವರು ನಿರ್ಮಾಪಕ ಕೆಸಿಎನ್ ಮೋಹನ್ ಹಾಗೂ ನಿರ್ದೇಶಕಿ ಪೂರ್ಣಿಮಾ ಮೋಹನ್ ಅವರ ಮುದ್ದಿನ ಮಗಳು ಸ್ವಾತಿಯ ಕೈ ಹಿಡಿಯಲಿದ್ದಾರೆ.

ಈ ಕುರಿತು ಕನ್ನಡಪ್ರಭ.ಕಾಮ್‌ಗೆ ಮಾತನಾಡಿದ ಕೆಸಿಎನ್ ಮೋಹನ್ ಅವರು, ಹೌದು, ಮದುವೆ ಪ್ರಸ್ತಾಪ ಇದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಕುಟುಂಬ ನಮ್ಮ ಮಗಳನ್ನು ನೋಡಲು ಇಂದು ಮನೆಗೆ ಬರುತ್ತಿದ್ದಾರೆ. ಮಾತುಕತೆಯ ಬಳಿಕ ಅಧಿಕೃತವಾಗಿ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ಎಂಐಟಿ ಬಿರ್ಲಾದಲ್ಲಿ ಎಂಬಿಎ ಪದವಿ ಪಡೆದಿರುವ ಸ್ವಾತಿ ಅವರು, ನಾಯಕ ನಟನಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿರುವ ನಿಖಿಲ್ ಗೌಡ ಅವರನ್ನು ವರಿಸಲಿದ್ದಾರೆ.

ಪೂರ್ಣಿಮಾ ಮೋಹನ್ ಅವರು ಮಾಜಿ ಸಂಸದೆ ರಮ್ಯಾ ಅಭಿನಯದ ಜೂಲಿ ಚಿತ್ರದ ನಿರ್ದೇಶನ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

3rd T20I: ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್, ವಿಂಡೀಸ್ ಗೆ ಗೆಲ್ಲಲು 224 ರನ್ ಗುರಿ ನೀಡಿದ ಭಾರತ

ವಿಶ್ವದಾದ್ಯಂತ ಏಕಕಾಲಕ್ಕೆ 'ರಾಮಾಯಣ ಭಾಗ 1' ಬಿಡುಗಡೆ: ದಸರಾ ಹಬ್ಬದಿಂದಲೇ ಮುಂಗಡ ಬುಕಿಂಗ್‌ ಆರಂಭ!

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್