ಬಂಧನ ಭೀತಿಯಲ್ಲಿ ಹುಚ್ಚ ವೆಂಕಟ್?
ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಹುಚ್ಚ ವೆಂಕಟ್ ಮತ್ತೊಬ್ಬ ಸ್ಪರ್ಧಿ ರವಿ ಮೂರೂರು ಎಂಬುವವರಿಗೆ ಹೊಡೆದು ಸ್ಪರ್ಧೆಯಿಂದ ಹೊರಹಾಕಿಸಿಕೊಂಡದ್ದು...
ಬೆಂಗಳೂರು: ಬಿಗ್ ಬಾಸ್ ಎಂಬ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಹುಚ್ಚ ವೆಂಕಟ್ ಮತ್ತೊಬ್ಬ ಸ್ಪರ್ಧಿ ರವಿ ಮುರೂರು ಎಂಬುವವರಿಗೆ ಹೊಡೆದು ಸ್ಪರ್ಧೆಯಿಂದ ಹೊರಹಾಕಿಸಿಕೊಂಡದ್ದು ಸಾಮಾಜಿಕ ಜಾಲತಾಣಗಳಲ್ಲಿ ಹಾಗು ಟಿವಿ ವಾಹಿನಿಗಳಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿತ್ತು.
ಬಿಗ್ ಬಾಸ್ ರಿಯಾಲಿಟಿ ಕಾರ್ಯಕ್ರಮದ ಅಂಗವಾಗಿ ವಾರಾಂತ್ಯದಲ್ಲಿ ನಡೆಯುವ 'ವಾರದ ಕಥೆ ಕಿಚ್ಚನ ಜೊತೆ' ಸಮಯದಲ್ಲಿ ಇದ್ದಕ್ಕಿದ್ದಂತೆ ರೊಚ್ಚಿಗೆದ್ದ ಹುಚ್ಚ ವೆಂಕಟ್ ಗಾಯಕ ರವಿ ಮೂರೂರ್ ಅವರ ಕಪಾಳಕ್ಕೆ ಬಾರಿಸಿದ್ದರು.
ಈಗ ಮೂಲಗಳ ಪ್ರಕಾರ ಪೊಲೀಸರು ಹುಚ್ಚ ವೆಂಕಟ್ ವಿರುದ್ಧ ಸ್ವಯಂಪ್ರೇರಿತ ಕೇಸು ದಾಖಲಿಸಿ ಅವರನ್ನು ಬಂಧಿಸಬಹುದು ಎಂದು ತಿಳಿದುಬಂದಿದೆ.
ವಿವಾದಗಳ ಕೇಂದ್ರವೇ ಆಗಿರುವ ಹುಚ್ಚ ವೆಂಕಟ್ ಈ ಹಿಂದೆ ನಟಿ ಮಾಜಿ ಸಂಸದೆ ರಮ್ಯ ಅವರನ್ನು ಅಪಹರಿಸಿ ಮದುವೆಯಾಗುತ್ತೇನೆ ಎಂದು ಹೇಳಿದ್ದಾಗಲೂ ಪೊಲೀಸರು ಇವರನ್ನು ವಿಚಾರಣೆಗೆ ಒಳಪಡಿಸಿದ್ದರು. ಬಿಗ್ ಬಾಸ್ ನಿಂದ ಹೊರಬಿದ್ದ ಮೇಲೆ ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಅವರ ಮೇಲೂ ಹರಿಹಾಯ್ದಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.