ಹುಚ್ಚ ವೆಂಕಟ್ 
ಸಿನಿಮಾ ಸುದ್ದಿ

ಬುಧವಾರ ಹುಚ್ಚ ವೆಂಕಟ್ ಜೈಲಿನಿಂದ ಬಿಡುಗಡೆ?

ಹುಚ್ಚ ವೆಂಕಟ್ ಬಿಡುಗಡೆಗೆ ಅಗತ್ಯವಿರುವ ಶ್ಯೂರಿಟಿ ಸಲ್ಲಿಸುವುದಾಗಿ ಹೇಳಿರುವುದರಿಂದ ಬುಧವಾರ ಹುಚ್ಚ ವೆಂಕಟ್‌ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ...

ಬೆಂಗಳೂರು:  ಒಕ್ಕಲಿಗರ ಹಿತಕರಕ್ಷಣಾ ಸೇನೆಯ ಅಧ್ಯಕ್ಷರು ಹುಚ್ಚ ವೆಂಕಟ್ ಬಿಡುಗಡೆಗೆ ಅಗತ್ಯವಿರುವ ಶ್ಯೂರಿಟಿ ಸಲ್ಲಿಸುವುದಾಗಿ ಹೇಳಿರುವುದರಿಂದ ಬುಧವಾರ ಹುಚ್ಚ ವೆಂಕಟ್‌ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ನವೆಂಬರ್ 25ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ವೆಂಕಟ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ, ಶ್ಯೂರಿಟಿ ಸಲ್ಲಿಸದಿರುವ ಕಾರಣ ಅವರು ಇನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಒಕ್ಕಲಿಗರ ಹಿತಕರಕ್ಷಣಾ ಸೇನೆಯ ಅಧ್ಯಕ್ಷರಾದ ಮಂಜೇಗೌಡ ಅವರು, 'ವೆಂಕಟ್‌ಗೆ ಶ್ಯೂರಿಟಿ ನೀಡುತ್ತೇನೆ, ಬುಧವಾರ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ, ವೆಂಕಟ್ ಅವರನ್ನು ಬಿಡುಗಡೆ ಮಾಡಿಸುತ್ತೇನೆ' ಎಂದು ಹೇಳಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆ ಪೊಲೀಸರು ವೆಂಕಟ್‌ನನ್ನು ನವೆಂಬರ್ 19ರಂದು ಬಂಧಿಸಿದ್ದರು. ಮೊದಲು ವೆಂಕಟ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಸದ್ಯ, ಕೋರ್ಟ್ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!