ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರಹಮಾನ್ 
ಸಿನಿಮಾ ಸುದ್ದಿ

ಎ ಆರ್ ರಹಮಾನ್ ಗೆ ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ

ಭಾರತೀಯ ಸಂಗೀತ ಲೋಕವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರಹಮಾನ್ ಅವರಿಗೆ ಅಕ್ಟೋಬರ್ ೨೬ ರಂದು

ಮುಂಬೈ: ಭಾರತೀಯ ಸಂಗೀತ ಲೋಕವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರಹಮಾನ್ ಅವರಿಗೆ ಅಕ್ಟೋಬರ್ ೨೬ ರಂದು ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಪಂಡಿತ್ ಹೃದಯನಾಥ್ ಮಂಗೇಶ್ಕರ್ ಅವರ ಜನ್ಮ ದಿನದಂದು ಐದನೇ ಹೃದಯನಾಥ್ ಮಂಗೇಶ್ಕರ್ ಪ್ರಶಸ್ತಿ ಯನ್ನು ರಹಮಾನ್ ಅವರಿಗೆ ಖ್ಯಾತ ಬಾಲಿವುಡ್ ನಿರ್ದೇಶಕ ಸುಭಾಶ್ ಗಯ್ ಅವರು ಪ್ರಧಾನ ಮಾಡಲಿದ್ದಾರೆ. ಹೃದಯನಾಥ್ ಮಂಗೇಶ್ಕರ್ ಅವರು ಖ್ಯಾತ ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಆಶಾ ಭೋಂಸ್ಲೆ ಅವರ ಸಹೋದರ.

ಮುಂಬೈನ ದೀನನಾಥ್ ಮಂಗೇಶ್ಕರ್ ಹಾಲಿನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಏರ್ಪಡಿಸಲಾಗಿದೆ.

ಈ ಹಿಂದೆ ಲತಾ ಮಂಗೇಶ್ಕರ್, ಆಶಾ ಭೋಂಸ್ಲೆ, ಅಮಿತಾಬ್ ಬಚ್ಚನ್ ಮತ್ತು ಸುಲೋಚನ ಥೈ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ