ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಸಾಮಾಜಿಕ ಕಾರ್ಯಗಳಿಗೆ ನೆರವಾಗುತ್ತಿರುವ ಪುನೀತ್ ಹಿನ್ನೆಲೆ ಗಾಯನದ ಆದಾಯ

ಹಿನ್ನೆಲೆ ಗಾಯನದಿಂದ ಬರುವ ಹಣವನ್ನು ಪುನೀತ್ ರಾಜ್ ಕುಮಾರ್ ಸಾಮಾಜಿಕಕಾರ್ಯಗಳಿಗೆ ನೀಡುತ್ತಿದ್ದಾರೆ.

ನಟನೆಯೊಂದಿಗೆ ಹಿನ್ನೆಲೆ ಗಾಯನದಲ್ಲೂ ಗುರುತಿಸಿಕೊಂಡಿರುವ ನಟ ಪುನೀತ್ ರಾಜ್ ಕುಮಾರ್ ಈವರೆಗೂ 45 ಚಿತ್ರಗೀತೆಗಳನ್ನು ಹಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪುನೀತ್ ರಾಜ್ ಕುಮಾರ್ ನಿರ್ಮಾಪಕರ ಲಕ್ಕಿ ವಾಯ್ಸ್ ಆಗಿದ್ದು, ಸ್ಯಾಂಡಲ್ ವುಡ್ ನಲ್ಲಿ ಪುನೀತ್ ಹಿನ್ನೆಲೆ ಗಾಯನಕ್ಕೆ ಬೇಡಿಕೆ ಹೆಚ್ಚುತ್ತಿದೆ.

ಹಿನ್ನೆಲೆ ಗಾಯನದಿಂದ ಬರುವ ಹಣವನ್ನು ಪುನೀತ್ ರಾಜ್ ಕುಮಾರ್ ಸಾಮಾಜಿಕಕಾರ್ಯಗಳಿಗೆ ನೀಡುತ್ತಿದ್ದಾರೆ. " ಪುನೀತ್ ರಾಜ್ ಕುಮಾರ್ ಅವರ ಹಿನ್ನೆಲೆ ಗಾಯನದ ಆದಾಯವನ್ನು ರಾಜ್ ಕುಮಾರ್ ಅವರ ಹೆಸರಿನಲ್ಲಿ ನಡೆಯುತ್ತಿರುವ ಚಾರಿಟಬಲ್ ಟ್ರಸ್ಟ್ ಗೆ ನೀಡಲಾಗುತ್ತಿದ್ದು ನೆರವಿನ ಅಗತ್ಯವಿರುವ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಳಸಲಾಗುತ್ತಿದೆ.

ಚಾರಿಟಬಲ್ ಟ್ರಸ್ಟ್ ನಿಂದ ನೆರವು ಪಡೆದಿರುವ ಓರ್ವ ವಿದ್ಯಾರ್ಥಿ ಈಗಾಗಲೇ ಡಾಕ್ಟರ್ ಆಗಿದ್ದು, ಈ ವರ್ಷ ಓರ್ವ ಯುವತಿ ಎಂ.ಟೆಕ್ ಗೆ ಸೇರಲು ಟ್ರಸ್ಟ್ ನೆರವಾಗಿದೆ ಎಂದು ಪುನೀತ್ ರಾಜ್ ಕುಮಾರ್ ಅವರ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT