ರಾಮ್ ಚರಣ್ ತೇಜಾ, ಚಿರಂಜೀವಿ 
ಸಿನಿಮಾ ಸುದ್ದಿ

ರಾಮ್‍ಚರಣ್ ಬ್ರೂಸ್ಲಿ ಚಿತ್ರದಲ್ಲಿ ಅಪ್ಪನ ಗೆಸ್ಟ್ ರೋಲ್

ನಟ ರಾಮ್ ಚರಣ್ ಅಭಿನಯದ ಹೊಚ್ಚ ಹೊಸ ಬ್ರೂಸ್ಲಿ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ಗೆಸ್ಟ್ ರೋಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪವರ್ ಸ್ಟಾರ್ ಪವನ್ ಕಲ್ಯಾಣ್ ಹಿನ್ನಲೆ ಧ್ವನಿ...

ನಟ ರಾಮ್ ಚರಣ್ ಅಭಿನಯದ ಹೊಚ್ಚ ಹೊಸ ಬ್ರೂಸ್ಲಿ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ಗೆಸ್ಟ್ ರೋಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪವರ್ ಸ್ಟಾರ್ ಪವನ್ ಕಲ್ಯಾಣ್ ಹಿನ್ನಲೆ ಧ್ವನಿ ನೀಡಲಿದ್ದಾರೆ ಎಂದು ಹೇಳಲಾಗಿದೆ. 
ಸದ್ಯ ಪವನ್ ಕಲ್ಯಾಣ್ ಸರ್ದಾರ್ ಗಬ್ಬರ್ ಸಿಂಗ್ ಚಿತ್ರದ ಚಿತ್ರೀಕರಣದಲ್ಲಿ ಬಿಸಿಯಾಗಿದ್ದರು ರಾಮ್‍ಚರಣ್ ಬ್ರೂಸ್ಲಿ ಚಿತ್ರಕ್ಕೆ ಹಿನ್ನಲೆ ಧ್ವನಿ ನೀಡಲು ಸಮ್ಮತಿಸಿದ್ದಾರೆ ಎನ್ನಲಾಗಿದೆ. 
ಶ್ರೀನು ವೆಟ್ಲಾ ನಿರ್ದೇಶನದ ಬ್ರೂಸ್ಲಿ ಚಿತ್ರದ ಮೆಗಾಸ್ಟಾರ್ ಚಿರಂಜೀವಿ 15 ನಿಮಿಷಗಳ ಕಾಲ ಕಾಣಿಸಿಕೊಳ್ಳಲಿದ್ದಾರೆ. ಚಿತ್ರ ದಸರಾ ಹಬ್ಬಕ್ಕೆ ತೆರೆ ಮೇಲೆ ಬರುವ ಸಾಧ್ಯತೆಗಳಿವೆ. 
ಇತ್ತೀಚೆಗಷ್ಟೇ ಚಿರಂಜೀವಿ ಅವರ 60ನೇ ವಸಂತಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಬ್ರೂಸ್ಲಿ ಚಿತ್ರದ ಮೊದಲ ಟೀಸರ್ ರಿಲೀಸ್ ಮಾಡಲಾಗಿತ್ತು. 
ಟೀಸರ್ ನಲ್ಲಿ ರಾಮ್ ಚರಣ್ ತೇಜಾರ ಪವರ್ ಫುಲ್ ಆ್ಯಕ್ಷನ್ ಜತೆ ಪಂಚಿಂಗ್ ಡೈಲಾಗ್ಸ್ ಕೂಡ ಇದ್ದು, ಇದೊಂದು ಪಕ್ಕಾ ಮಾಸ್ ಮಸಾಲ ಚಿತ್ರ ಎನ್ನುವ ಸೂಚನೆ ನೀಡಿದೆ. ರಾಮ್ ಚರಣ್ ಗೆ ಜತೆಯಾಗಿ ರಕೂಲ್ ಪ್ರೀತ್ ನಟಿಸಿದ್ದು, ಚಿತ್ರ ಕಲರ್ ಫುಲ್ ಲೋಕೆಷನ್ ಗಳಲ್ಲಿ ಅದ್ಭುತವಾಗಿ ಮೂಡಿಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT