ಪ್ರಜ್ವಲ್ ದೇವರಾಜ್ 
ಸಿನಿಮಾ ಸುದ್ದಿ

ಪ್ರಜ್ವಲ್ ದೇವರಾಜ್ ಗೆ ಕಂಕಣ ಭಾಗ್ಯ

ಕನ್ನಡ ಸಿನಿಮಾ ಇಂಡಸ್ಟ್ರಿಯ ಡೈನಾಮಿಕ್ ಹೀರೋ ದೇವರಾಜ್ ಪುತ್ರ ಪ್ರಜ್ವಲ್ ದೇವರಾಜ್, ತಮ್ಮ ದೀರ್ಘಕಾಲದ ಗೆಳತಿ ...

ಕನ್ನಡ ಸಿನಿಮಾ ಇಂಡಸ್ಟ್ರಿಯ ಡೈನಾಮಿಕ್ ಹೀರೋ ದೇವರಾಜ್ ಪುತ್ರ ಪ್ರಜ್ವಲ್ ದೇವರಾಜ್, ತಮ್ಮ ದೀರ್ಘಕಾಲದ ಗೆಳತಿ  ರಾಗಿಣಿ ಚಂದ್ರನ್ ಎಂಬಾಕೆಯನ್ನು ಮುಂದಿನ ತಿಂಗಳು ಮದುವೆಯಾಗುತ್ತಿದ್ದಾರೆ.

ಬೆಂಗಳೂರು ಮೂಲದ ನೃತ್ಯಗಾರ್ತಿ ಹಾಗೂ ಮಾಡೆಲ್ ಆಗಿರುವ ರಾಗಿಣಿ ಈಗಾಗಲೇ ಅನೇಕ ವಿಡಿಯೋ ಮತ್ತು ಪತ್ರಿಕೆ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ಮದುವೆ ಅಕ್ಟೋಬರ್ 20ರಿಂದ 25ರ ಮಧ್ಯದ ಯಾವುದಾದರೊಂದು ದಿನ ನಡೆಯಲಿದೆ ಎಂದು ಇವರ ಆಪ್ತ ಮೂಲಗಳು ತಿಳಿಸಿವೆ.

ಕನ್ನಡ ಸಿನಿಮಾರಂಗದಲ್ಲಿ ಕಳೆದ ಎಂಟು ವರ್ಷಗಳಿಂದಿರುವ ಪ್ರಜ್ವಲ್ ದೇವರಾಜ್  ಇದುವರೆಗೆ 22 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ತಮ್ಮ ತಂದೆಯ ಜತೆ ನಟಿಸಿರುವ ಅರ್ಜುನ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದಲ್ಲಿ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅದಲ್ಲದೆ ಇನ್ನೊಂದು ಚಿತ್ರ ಕೂಡ ತೆರೆಗೆ ಬರಲು ಸಿದ್ಧವಾಗಿದೆ.
ಈ ಹೊತ್ತಿನಲ್ಲಿ ಮದುವೆಯ ಬಾಂಧವ್ಯಕ್ಕೆ ಅಡಿ ಇಡುತ್ತಿರುವ ಪ್ರಜ್ವಲ್ ದೇವರಾಜ್ ಜೋಡಿಗೆ ಅಭಿನಂದನೆಗಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ಅಯೋಧ್ಯೆ ಟ್ರಸ್ಟ್ ಸಿಇಒ ಅಧಿಕಾರಗಳನ್ನು ನಿರ್ಧರಿಸುತ್ತದೆ, ಸರ್ಕಾರವಲ್ಲ: ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video