ಗಾಯಕಿ ಆಶಾ ಭೋಸ್ಲೆ ಮತ್ತು ಪುತ್ರ ಹೇಮಂತ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಖ್ಯಾತ ಗಾಯಕಿ ಆಶಾ ಭೋಸ್ಲೆ ಹಿರಿಯ ಪುತ್ರ ಹೇಮಂತ್ ನಿಧನ

ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಹಿರಿಯ ಪುತ್ರ ಹೇಮಂತ್ ಅವರು ಸೋಮವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ...

ನವದೆಹಲಿ: ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಹಿರಿಯ ಪುತ್ರ ಹೇಮಂತ್ ಅವರು ಸೋಮವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ದೀರ್ಘಕಾಲದಿಂದ ಕ್ಯಾನ್ಸರ್ ಗೆ ತುತ್ತಾಗಿ ಸ್ಕಾಟ್ ಲೆಂಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 66 ವರ್ಷದ ಹೇಮಂತ್ ಚಿಕಿತ್ಸೆ ಫಲಿಸದೇ ಸೋಮವಾರ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳ  ತಿಳಿಸಿವೆ. ವಿಪರ್ಯಾಸವೆಂದರೆ ಆಶಾ ಭೋಸ್ಲೆ ಅವರ ಹಿರಿಯ ಸಹೋದರಿ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ 86ನೇ ಜನ್ಮದಿನದಂದೇ ಹೇಮಂತ್ ಇಹಲೋಕ ತ್ಯಜಿಸಿದ್ದಾರೆ.

ಬಹುಮುಖ ಪ್ರತಿಭೆಯಾಗಿದ್ದ ಹೇಮಂತ್ ಸಂಗೀತ ಸಂಯೋಜಕರಾಗಿದ್ದರು. ಅಲ್ಲದೆ ಸುಮಾರು 15 ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ದಾಮಾದ್’ ಚಿತ್ರದಲ್ಲಿ ಅವರು ಸಂಗೀತ  ನೀಡಿದ್ದ ‘ಜಾಗೆ ಜಾಗೆ ನೈನೋ ಮೇ’ ಅವರಿಗೆ ಚಿತ್ರರಂಗದಲ್ಲಿ ಖ್ಯಾತಿ ತಂದು ಕೊಟ್ಟಿತ್ತು. ಅಲ್ಲದೇ ಮರಾಠಿ ಭಾಷೆಯಲ್ಲಿ ಆಶಾ ಭೋಸ್ಲೆ ಹಾಡಿದ ಹಲವಾರು ಟಾಪ್‌ ಹಾಡುಗಳಿಗೆ ಅವರು ಸಂಗೀತ   ಸಂಯೋಜನೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT