ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಕಬಾಲಿ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ರಜನಿಯ ಮತ್ತೆರಡು ಗ್ರಾಂಡ್ ಲುಕ್ ಪೋಸ್ಟರ್‍ಗಳು ಬಿಡುಗಡೆಯಾಗಿವೆ.
ಈ ಹಿಂದೆ ದಟ್ಟ ಗಡ್ಡ ಬಿಟ್ಟು ಬಹುಮಹಡಿ ಕಟ್ಟಡವೊಂದರಲ್ಲಿ ಕಾಲ ಮೇಲೆ ಕಾಲು ಹಾಕಿ ಕುಳಿತಿರುವ ಅವರ ಭಂಗೀ ಭಾರಿ ಸದ್ದು ಮಾಡಿತ್ತು. ಇದೀಗ ರಜನಿಯ ಮತ್ತೆರಡು ಪೋಸ್ಟರ್ ಗಳು ಬಿಡುಗಡೆಯಾಗಿದ್ದು ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಕೆರಳಿಸುತ್ತಿದೆ.
ಇದೀಗ ಬಿಡುಗಡೆಯಾಗಿರುವ ಪೋಸ್ಟರ್ ನ ಒಂದಲ್ಲಿ ರಜನಿ ಕೈಯಲ್ಲಿ ಸಿಗರೇಟು ಹಿಡಿದು ತೀಕ್ಷ್ಣವಾಗಿ ನೋಡುತ್ತಿರುವುದು. ಮತ್ತೊಂದರಲ್ಲಿ ರಜನಿ ವೈಟ್ ಅಂಡ್ ವೈಟ್ ನಲ್ಲಿ ಕೋಪ ಮಿಶ್ರಿತ ಮೃದು ಮಂದಹಾಸದಲ್ಲಿರುವ ಮಧ್ಯವಯಸ್ಕನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಕಬಾಲಿ ರಜನಿಕಾಂತ್ ಅವರ 159 ನೇ ಚಿತ್ರವಾಗಿದ್ದು, ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಜನಿಗೆ ರಾಧಿಕ ಆಪ್ಟೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ರಂಜಿತ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 2016ರ ಏಪ್ರಿಲ್ ನಲ್ಲಿ ಚಿತ್ರ ತೆರೆಗೆ ಅಪ್ಪಳಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics