ಕಿರುತೆರೆ ನಟಿ ಪ್ರತ್ಯೂಷ ಹಾಗೂ ಗೆಳೆಯ ರಾಹುಲ್ ರಾಜ್ ಸಿಂಗ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಪ್ರತ್ಯೂಷ ಆತ್ಮಹತ್ಯೆ ಪ್ರಕರಣ: ಕೇಸ್ ಕೈ ಬಿಟ್ಟ ರಾಹುಲ್ ಪರ ವಕೀಲ

ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ರಾಹುಲ್ ಪರವಾಗಿ ವಾದ ಮಂಡಿಸುತ್ತಿದ್ದ ವಕೀಲ ನೀರಜ್ ಗುಪ್ತಾ ಅವರು ಇದ್ದಕ್ಕಿದ್ದಂತೆ ಪ್ರಕರಣವನ್ನು ಕೈ ಬಿಟ್ಟಿದ್ದಾರೆಂದು...

ಮುಂಬೈ: ಕಿರುತೆರೆ ನಟಿ ಪ್ರತ್ಯೂಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ರಾಹುಲ್ ಪರವಾಗಿ ವಾದ ಮಂಡಿಸುತ್ತಿದ್ದ ವಕೀಲ ನೀರಜ್ ಗುಪ್ತಾ ಅವರು ಇದ್ದಕ್ಕಿದ್ದಂತೆ ಪ್ರಕರಣವನ್ನು ಕೈ ಬಿಟ್ಟಿದ್ದಾರೆಂದು ತಿಳಿದುಬಂದಿದೆ.

ಪ್ರತ್ಯೂಷ ಅವರ ಮೃತದೇಹ ಏ.1 ರಂದು ನೇಣಿಗೆ ಶರಣಾಗಿರುವ ರೀತಿಯಲ್ಲಿ ಪತ್ತೆಯಾಗಿತ್ತು. ಪ್ರತ್ಯೂಷ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತಂತೆ ಸಾಕಷ್ಟು ಅನುಮಾನಗಳು ಮೂಡಿದ್ದವು. ಅಲ್ಲದೆ ಪ್ರತ್ಯೂಷಳನ್ನು ಹತ್ತಿರದಲ್ಲಿ ನೋಡಿದವರು ರಾಹುಲ್ ನತ್ತ ಬೆರಳು ಮಾಡಿದ್ದರು.

ಹೀಗಾಗಿ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ಪೊಲೀಸರು ರಾಹುಲ್ ನನ್ನು ಬಂಧನಕ್ಕೊಳಪಡಿಸಿದ್ದರು. ರಾಹುಲ್ ಪರವಾಗಿ ವಕೀಲ ನೀರಜ್ ಗುಪ್ತಾ ಅವರು ವಾದ ಮಂಡಿಸುತ್ತಿದ್ದರು. ಆದರೆ, ಆದಾವ ಕಾರಣಕ್ಕೋ ಏನೋ ಇದೀಗ ಪ್ರಕರಣವನ್ನು ಕೈಬಿಟ್ಟಿದ್ದಾರೆಂದು ತಿಳಿದುಬಂದಿದೆ.

ಪ್ರಸ್ತುತ ನಟ ರಾಹುಲ್ ಅವರು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಮುಂಬೈ ನ ದಿನ್ದೋಶಿ ನ್ಯಾಯಾಲಯದ ಬಳಿ ಅರ್ಜಿ ಸಲ್ಲಿಸಿದ್ದಾರೆಂದು ಹೇಳಲಾಗುತ್ತಿದೆ.

ಇತ್ತೀಚೆಗಷ್ಟೇ ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡಿದ್ದ ಪ್ರತ್ಯೂಷ ತಾಯಿ, ಕಂದಿವಲ್ಲಿಯಲ್ಲಿ ಫ್ಲ್ಯಾಟ್ ನಲ್ಲಿ  ಪ್ರತ್ಯೂಷಳೊಂದಿಗೆ ಜೀವನ ನಡೆಸುತ್ತಿದ್ದೆ. ರಾಹುಲ್ ಹಾಗೂ ಪ್ರತ್ಯೂಷ ಪ್ರತೀ ದಿನ ಜಗಳವಾಡುತ್ತಿದ್ದರು. ಇದಾದ ಬಳಿಕ ಇಬ್ಬರು ಜಗಳ ವಾಡದೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಗಮನ ಹರಿಸುವಂತೆ ಹೇಳಿ ಊರಿಗೆ ಹೊರಟು ಹೋಗಿದ್ದೆ. ನಂತರ ಪ್ರತ್ಯೂಷ ಹಾಗೂ ರಾಹುಲ್ ಫ್ಲ್ಯಾಟ್ ನಲ್ಲಿ ಜೀವನ ನಡೆಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!