ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಸಿಎನ್ ವೆಂಕಟಾಚಲ (42) ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಕಳೆದೆರಡು ವಾರಗಳಿಂದ ಹೆಚ್1 ಎನ್1 ಕಾಯಿಲೆಯಿಂದ ಬಳಸುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ.
'ಚಿತ್ರಮಂದಿರದಲ್ಲಿ' ಎಂಬ ಚಿತ್ರ ನಿರ್ದೇಶಿಸಿದ್ದ ವೆಂಕಟಾಚಲ ನಟ ಸಂಚಾರಿ ವಿಜಯ್ ಜತೆ ಸಿನಿಮಾ ಮಾಡುವ ತಯಾರಿಯಲ್ಲಿದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರದರ್ಶನಗೊಂಡಿದ್ದ 'ಚಿತ್ರಮಂದಿರದಲ್ಲಿ' ಚಿತ್ರ ಎಲ್ಲರ ಪ್ರಶಂಸೆಗೆ ಪಾತ್ರವಾಗಿತ್ತು.
ಸೋಮವಾರ ಸಂಜೆ ನಾಗಸಂದ್ರದಲ್ಲಿರುವ ಅವರ ಮನೆಯಲ್ಲಿ ಅಂತ್ಯ ಸಂಸ್ಕಾರ ನಡೆದಿದೆ.